NEWSದೇಶ-ವಿದೇಶ

ಜಮ್ಮು&ಕಾಶ್ಮೀರದ ಸಾಂಭಾದಲ್ಲಿ ಏಳು ಉಗ್ರರ ಹೊಡೆದುರುಳಿಸಿದ ಭಾರತದ ಗಡಿ ಭದ್ರತಾ ಪಡೆ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ  ಸಂಪೂರ್ಣ ಮಾಹಿತಿ: https://ksrtcarogya.in/

ನ್ಯೂಡೆಲ್ಲಿ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್‌ ಸಂಘಟನೆಯ ಏಳು ಮಂದಿ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.

ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್ (BSF) ವಿಫಲಗೊಳಿಸಿದೆ.

ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್‌ಎಫ್‌ ಯೋಧರು ಗುಂಡಿಕ್ಕಿ ಕೊಂದಿದ್ದಾರೆ ಈ ಮಾಹಿತಿಯನ್ನು ಬಿಎಸ್‌ಎಫ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಜಮ್ಮು, ರಾಜಸ್ಥಾನ ಮತ್ತು ಪಂಜಾಬ್‌ನ ಅಮೃತಸರ ಸೇರಿ ಭಾರತದ 15 ನಗರಗಳನ್ನು ಗುರಿಯಾಗಿಸಿ ಪಾಕಿಸ್ತಾನ ಮಿಸೈಲ್‌, ಡ್ರೋನ್‌ ದಾಳಿ ನಡೆಸಿತು. ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್‌ನ ಎಲ್ಲಾ ಮಿಸೈಲ್‌ಗಳನ್ನು ಹೊಡೆದುರುಳಿಸಿದೆ.

10 ಸಾವಿರ ಮಂದಿ ಸ್ಥಳಾಂತರ: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನತೆ ಹೆಚ್ಚಿದ ಬೆನ್ನಲ್ಲೇ ಗಡಿ ಗ್ರಾಮಗಳಿಂದ ಸುಮಾರು 10,000 ನಿವಾಸಿಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಈ ಹೊತ್ತಿನಲ್ಲೇ ಪಾಕ್‌ ಅಮಾಯಕರನ್ನ ಗುರಿಯಾಗಿಸಿ ಶೆಲ್‌ ದಾಳಿ ನಡೆಸಿದೆ. ಪಾಕ್‌ ದಾಳಿಯಿಂದ ಪೂಂಚ್‌ ಜಿಲ್ಲೆ ಮಾತ್ರವಲ್ಲದೆ, ಉರಿ, ಬಾರಾಮುಲ್ಲಾ, ಕರ್ನಾ, ತಂಗ್ಧರ್, ಮೆಂಧರ್‌ ಸೇರಿದಂತೆ ವಿವಿಧೆಡೆ ನಾಗರಿಕರ ಮನೆ ಮಳಿಗೆಗಳು ಹಾನಿಗೊಳಗಾಗಿವೆ.

ಮಿಲಿಟರಿ ಕಂಟೋನ್ಮೆಂಟ್‌ಗಳೇ ಶಿಫ್ಟ್‌: ಇನ್ನೂ ಭಾರತೀಯ ರಕ್ಷಣಾ ಪಡೆಗಳ ದಿಟ್ಟ ಉತ್ತರಕ್ಕೆ‌ ಕಕ್ಕಾಬಿಕ್ಕಿಯಾಗಿರುವ ಪಾಕಿಸ್ತಾನದ ಸಿಂಧ್, ಪಂಜಾಬ್ ಕಂಟೋನ್ಮೆಂಟ್‌ಗಳಲ್ಲಿ ಭೀತಿ ಹೆಚ್ಚಾಗಿದೆ. ಹೀಗಾಗಿ ಮಿಲಿಟರಿ ಕಂಟೋನ್ಮೆಂಟ್‌ಗಳನ್ನ ಸಾಮೂಹಿಕವಾಗಿ ಸ್ಥಳಾಂತರ ಮಾಡಿಕೊಳ್ಳುತ್ತಿದೆ.

Advertisement
Megha
the authorMegha

Leave a Reply

error: Content is protected !!