NEWSನಮ್ಮಜಿಲ್ಲೆ

ಮೈಸೂರು: ನಾಳೆ ಅರಮನೆ ಆವರಣದಲ್ಲಿ ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್: ಡಿಸಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಮೇ 10ರ ಸಂಜೆ 4 ಗಂಟೆಗೆ ಅರಮನೆ ಆವರಣದಲ್ಲಿ ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್ ಕುರಿತು ನಿನ್ನೆ ಮೇ 8ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೇ 10 ರಂದು ಸಿವಿಲ್ ಡಿಫೆನ್ಸ್ ಮಾಕ್‌ಡ್ರಿಲ್‌ ಅರಮನೆ ಆವರಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ಮಾಕ್‌ಡ್ರಿಲ್‌ಗೆ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಮಾಕ್ ಡ್ರಿಲ್ ವ್ಯವಸ್ಥಿತವಾಗಿ ಮಾಡಬೇಕು. ಇದಕ್ಕೆ ಅಗತ್ಯವಾದ ಮಾನವ ಸಂಪನ್ಮೂಲವನ್ನು ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಅರಮನೆ ಆವರಣದಲ್ಲಿ ಮಾಕ್‌ಡ್ರಿಲ್‌ ಮಾಡಲು ಸೂಕ್ತವಾದ ಸ್ಥಳವನ್ನು ಗುರುತಿಸಿಕೊಂಡು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಿ, ಕಂಟ್ರೋಲ್ ರೂಂ, ಫೈರ್ ಇಂಜಿನ್, ಆಂಬುಲೆನ್ಸ್, ಹಾಸ್ಪಿಟಲ್ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಇರಬೇಕು. ಮಾಕ್‌ಡ್ರಿಲ್ ವ್ಯವಸ್ಥಿತವಾಗಿ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ನೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು, ಡಿ ಸಿ.ಪಿ. ಮುತ್ತುರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಇದ್ದಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೀರುವ ಸಾರಿಗೆ ನೌಕರರು: ಧರ್ಮ ಸಂಕಟದಲ್ಲಿ ಪೊಲೀಸರು ಮೈಸೂರು: ಹೆಚ್ಚುವರಿ ಹಣ 100 ರೂ. ಪಾವತಿಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ KSRTC: ಪ್ರಣಾಳಿಕೆ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ... KSRTC: ಅರಿಸಿನಕುಂಟೆಯಲ್ಲಿ ಪಾದಯಾತ್ರೆ ತಡೆದಿದ್ದ ಪೊಲೀಸರು ಸದ್ಯ ಫ್ರೀಡಂ ಪಾರ್ಕ್‌ನತ್ತ ಹೊರಟ ಸಾರಿಗೆ ನೌಕರರು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ, ಸಾರಿಗೆ ಸಚಿವರಿಗೆ ಮಾರ್ಗದರ್ಶನ ನೀಡುವಂತೆ ಹೈ ಕೋರ್ಟ್‌ ಸಿಜೆಗೆ ಲಿಖಿತ ಮನವ... KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು KSRTC: ಮುಂದಿನ ಚಕ್ರದ ಮುಡಿ ಕಟ್ಟಾಗಿ ಬಸ್‌ ಪಲ್ಟಿ- ಸಣ್ಣಪುಟ್ಟಗಾಯಗಳೊಂದಿಗೆ 74 ಪ್ರಯಾಣಿಕರು ಪಾರು KSRTC ನೆಲಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನತ್ತ ಹೊರಟ ಪಾದಯಾತ್ರೆ: ಆಮರಣಾಂತ ಉಪವಾಸ ಸತ್ಯಾಗ್ರಹ ! KSRTC: ಸರ್ಕಾರದ ವಿಳಂಬ ನೀತಿ ಖಂಡಿಸಿ ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಆಮರಣಾಂತ ಉಪವಾಸ ಸತ್ಯಾಗ್ರಹ NWKRTC: ಜಾತಿರಹಿತ ಲಿಂಗ ತಾರತಮ್ಯ ಇಲ್ಲದ ಸಮಾಜ ಕಟ್ಟಲು ಶ್ರಮಿಸಿದವರು ಬಸವಣ್ಣ: ಸಾರಿಗೆ ಅಧಿಕಾರಿ ಅಶೋಕ ಪಾಟೀಲ