NEWSಕೃಷಿನಮ್ಮಜಿಲ್ಲೆ

ರೈತರ ರಕ್ಷಣಾತ್ಮಕ ನಿರ್ಧಾರ ಕೈಗೊಳ್ಳುತ್ತೇವೆ: ರೈತ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಅಭಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಸಕ್ಕರೆ ಸಚಿವರ ಸಭೆಯನ್ನು ಇದೇ ನವೆಂಬರ್‌ 21ರಂದು ಬೆಂಗಳೂರಿನಲ್ಲಿ ಕರೆದು ಚರ್ಚಿಸುವ ಮೂಲಕ ರೈತರ ಪರ ರಕ್ಷಣಾತ್ಮಕ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತ ಮುಖಂಡರಿಗೆ ಭರವಸೆ ನೀಡಿದ್ದಾರೆ.

ಮೈಸೂರಿನ ಶಾರದಾದೇವಿ ನಗರದ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಇಂದು ಬೆಳಗ್ಗೆ ಆಯೋಜಿಸಿದ್ದ ರೈತರ ಸಭೆಯಲ್ಲಿ ಕಬ್ಬು ಬೆಳೆಗಾರ ರೈತರ ಸಮಸ್ಯೆ ಕುರಿತು ಚರ್ಚಿಸಿದರು. ಈ ವೇಳೆ ರೈತರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ನಮ್ಮ ಸರ್ಕಾರ ನೋಡಿಕೊಳ್ಳಲು ಬದ್ಧವಾಗಿತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘ ರಾಜ್ಯಾಧ್ಯಕ್ಷ ಕುರುಬೂರು ಶಾಂತ ಕುಮಾರ್‌, ಜಿಲ್ಲೆಯಾದ್ಯಂತ ರೈತ ಮುಖಂಡರನ್ನು ಪೊಲೀಸರು ರಾತ್ರೋರಾತ್ರಿ ಬಂಧಿಸಿದ್ದರು. ಇಂದು ರಾಜ್ಯದಲ್ಲಿ ಪೊಲೀಸ್ ಆಡಳಿತವಿದೆಯೇ ಎಂದು ಪ್ರಶ್ನಿಸಿದರು.

ಇನ್ನು ನಾವು ಏಕಾಏಕಿ ಹೋರಾಟಗಳನ್ನು ಮಾಡುತ್ತಿಲ್ಲ. ತಮಗೆ ಹಾಗೂ ಜಿಲ್ಲಾಡಳಿತಕ್ಕೆ 10 ದಿನಗಳ ಮುಂಚೆಯೇ ಪತ್ರವನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬರದ ಕಾರಣ ನಾವು ಹೋರಾಟ ಮಾಡಿದ್ದೇವೆ. ಇದನ್ನು ಪೊಲೀಸರು ಅರ್ಥ ಮಾಡಿಕೊಳ್ಳದೆ ರೈತ ಮುಖಂಡರ ಜತೆ ಸಮಾಲೋಚನೆ ಮಾಡದೆ ಏಕಾಏಕಿ ಬಂಧನ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ಈ ರೀತಿ ಪೊಲೀಸರು ನಡೆದುಕೊಂಡರೆ ನಿಮ್ಮ ಸರ್ಕಾರಕ್ಕೆ ಗೌರವ ಬರುವುದಿಲ್ಲ. ನೀವು ಕೂಡ ಹೋರಾಟದಿಂದಲೇ ಬಂದಿದ್ದು, ಆದ್ದರಿಂದ ಕೂಡಲೇ ಅಂತಹ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಬೇಕು. ಮುಂದೆ ಈ ರೀತಿಯ ನಡವಳಿಕೆಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಬ್ಬು ಬೆಳೆ ಕಳೆದ ವರ್ಷಕ್ಕಿಂತ 50ರಷ್ಟು ಕಡಿಮೆ ಇದ್ದು ಬೇರೆ ಜಿಲ್ಲೆಗಳ ಕಾರ್ಖಾನೆಗಳು ಪೈಪೋಟಿಯಲ್ಲಿ ಕಬ್ಬಿನ ಹೆಚ್ಚುವರಿ ದರ ನೀಡುತ್ತಿವೆ. ನಿಮ್ಮ ಕ್ಷೇತ್ರದ ಬಣ್ಣಾರಿ ಕಾರ್ಖಾನೆಯಲ್ಲಿ ಅತಿ ಕಡಿಮೆ ನೀಡುತ್ತಿದ್ದಾರೆ. 4 ತಿಂಗಳಿಂದ ನಾಲ್ಕು ಸಭೆ ನಡೆದರು ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ಹೇಳಿದರು.

ಇನ್ನು ಕಳೆದ ವರ್ಷದ 150 ಕಬ್ಬಿನ ಬಾಕಿ ಹಣದ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹೆಚ್ಚುವರಿ 150 ರೂ. ಆದೇಶದ ಬಗ್ಗೆ ನ್ಯಾಯಾಲಯದಲ್ಲಿ ನಿಮ್ಮ ಸರ್ಕಾರ ಮುಚ್ಚಳಿಕೆ ಬರೆದುಕೊಟ್ಟು ನಾವು ಸರ್ಕಾರ ಇತ್ಯರ್ಥ ಪಡಿಸುತ್ತೇವೆ ಎಂದು ಕೇಸ್ ವಾಪಸ್ ಪಡೆದಿದೆ, ಇದು ನ್ಯಾಯವೇ ತಾವು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಬಣ್ಣಾರಿ ಅಮ್ಮನ್ ಕಾರ್ಖಾನೆಯವರು ಬಾಕಿ ಹಣ ನೀಡದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನಿಮ್ಮ ಕ್ಷೇತ್ರಕ್ಕೆ ಸಂಬಂಧಪಟ್ಟ 25,000 ರೈತರು ಈ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡುತ್ತಿದ್ದಾರೆ, ನೀವು ಅವರ ಹಿತ ಶಕ್ತಿ ಯಾಕೆ ಕಾಪಾಡುತ್ತಿಲ್ಲ? ಧಾರವಾಡ ಜಿಲ್ಲೆಯ ಮಂತ್ರಿಗಳು ಸಕ್ಕರೆ ಕಾರ್ಖಾನೆ ಸಭೆ ನಡೆಸಿ ಹೆಚ್ಚುವರಿ 150 ರೂ.ದರ ನಿಗದಿಪಡಿಸಿ ಕಾರ್ಖಾನೆ ಆರಂಭಿಸಿ ಎಂದು ಸೂಚನೆ ನೀಡಿ ಅದರಂತೆ ಪಾವತಿಸುತಿದ್ದಾರೆ. ಆದರೆ, ನೀವು ಯಾಕೆ ಈ ಬಗ್ಗೆ ಚಿಂತನೆ ನಡೆಸುತ್ತಿಲ್ಲ ಎಂದು ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ರೈತರು ಬರಗಾಲ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಹಣ ಕೊಡಿಸಿದರೆ ತುಂಬಾ ಅನುಕೂಲವಾಗುತ್ತದೆ. ಕಾರ್ಖಾನೆ ಕೇವಲ ಇನ್ನೂ ಎರಡು ತಿಂಗಳು ಮಾತ್ರ ಇರುತ್ತದೆ ಆದ್ದರಿಂದ ತಕ್ಷಣ ತಾವು ಸಭೆ ಮಾಡಿ ಹಣ ಕೊಡಿಸಬೇಕು ಅಡ್ವಕೇಟ್ ಜನರಲ್ ಅವರು ನ್ಯಾಯಲಯದಲ್ಲಿ ಸರ್ಕಾರದ ಆದೇಶವನ್ನು ಎತ್ತಿ ಹಿಡಿಯದ ಸಮರ್ಥ ವಾದ ಮಂಡಿಸದೆ ಇದ್ದ ಕಾರಣ ರಾಜ್ಯದ ಸುಮಾರು 40 ಲಕ್ಷ ಕಬ್ಬು ಬೆಳೆಗಾರರಿಗೆ 950 ಕೋಟಿ ರೂ.ಗೂ ಹೆಚ್ಚು ಮೋಸವಾಗುತ್ತಿದೆ.

ತಾವೇ ವಿಪಕ್ಷ ನಾಯಕರಾಗಿದ್ದಾಗ ಬೆಳಗಾವಿ ವಿಧಾನಸಭೆಯಲ್ಲಿ ಕಬ್ಬು ಬೆಳೆಗಾರರ ಪರವಾಗಿ ಸುದೀರ್ಘ ಚರ್ಚೆ ಮಾಡಿದ ನಂತರ ಸರ್ಕಾರ 150 ರೂ. ಆದೇಶ ಹೊರಡಿಸಿದೆ. ಅದನ್ನು ತಾವು ಮರೆತಿರುವುದು ಸರಿಯಲ್ಲ, ಆದ್ದರಿಂದ ಕೂಡಲೇ ಕಳೆದ ವರ್ಷ ಆದೇಶ ಮಾಡಿರುವ 150 ರೂಪಾಯಿಗಳನ್ನು ಕೊಡಿಸಬೇಕು. ರಾಜ್ಯದಲ್ಲಿ ಬೇರೆ ಬೇರೆ ಕಾರ್ಖಾನೆ ಯವರು FRP ಗಿಂತ 150ರಿಂದ 200 ರೂ.ಗಳನ್ನು ಹೆಚ್ಚಿಗೆ ಕೊಡುತ್ತಿದ್ದಾರೆ. ಆದರೆ ಈ ಕಾರ್ಖಾನೆಯವರು ನೀಡುತ್ತಿಲ್ಲ, ಆದ್ದರಿಂದ ಕೂಡಲೇ ತಾವು ಕ್ರಮ ಕೈಗೊಂಡು ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ ವಿದ್ಯುತ್ ಸಮಸ್ಯೆ ಎದುರಾಗಿದೆ ರೈತರಿಗೆ ಹಗಲು ಹೊತ್ತಿನಲ್ಲಿ 10 ಗಂಟೆ ವಿದ್ಯುತ್ ಕೊಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು ಹುಸಿಯಾಗಿದೆ. ನೀವು ಮಾತು ಕೊಟ್ಟಂತೆ ನಡೆದುಕೊಳ್ಳಿ. ಈಗ ಕೇವಲ ಮೂರು-ನಾಲ್ಕು ಗಂಟೆ ಮಾತ್ರ ವಿದ್ಯುತ್ ನೀಡುತ್ತಿದ್ದಾರೆ. ಅದೂ ಕೂಡ ರಾತ್ರಿ ಪಾಳಯದಲ್ಲಿ ನೀಡುತ್ತಿದ್ದಾರೆ. ಇದರಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ ಆದ್ದರಿಂದ ನೀವು ಚುನಾವಣೆಗೆ ಮುಂಚೆ ಹೇಳಿದಂತೆ ನಡೆದುಕೊಳ್ಳಬೇಕು. ಪ್ರತಿ ದಿನ ಹಗಲು ವೇಳೆ 10 ಗಂಟೆ ವಿದ್ಯುತ್ ನೀಡುವಂತೆ ಆದೇಶ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯಾದ್ಯಂತ ಬರಗಾಲ ಎದುರಾಗಿದ್ದು 226 ತಾಲೂಕುಗಳನ್ನು ಬರಗಾಲ ಪ್ರದೇಶ ಎಂದು ಘೋಷಣೆ ಮಾಡಿದ್ದೀರಿ. ಆದರೆ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಆದ್ದರಿಂದ ಪರಿಹಾರ ಹಣ ಕೂಡಲೇ ಬಿಡುಗಡೆ ಮಾಡಿ ರೈತರ ರಕ್ಷಣೆ ಮಾಡಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಸಕರಾತ್ಮಕವಾಗಿ ಸ್ಪಂದಿಸಿದ್ದು, ಇದೇ ತಿಂಗಳು 21ರಂದು ಬೆಂಗಳೂರಿನಲ್ಲಿ ನಡೆಯು ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಇನ್ನು ಮುಂದಿನ ದಿನಗಳಲ್ಲಿ ಹೋರಾಟಗಾರರ ಬಗ್ಗೆ ಪೊಲೀಸರ ವರ್ತನೆ ಸರಿಪಡಿಸಿಕೊಳ್ಳುವಂತೆ ಸೂಚಿಸುತ್ತೇನೆ ಎಂದೂ ತಿಳಿಸಿದರು.

ಸಭೆಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಚುಂಚರಾಯನಹುಂಡಿ ಸಿದ್ದರಾಮಯ್ಯ ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು