NEWS

ಕೊರೊನಾದಿಂದ ಮೃತಪಟ್ಟ ಕಲಬುರಗಿ ವೃದ್ಧನ ಪುತ್ರಿ ಗುಣಮುಖ

ಆಸ್ಪತ್ರೆಯಿಂದ ಬಿಡುಗಡೆ l ಜಿಲ್ಲಾಧಿಕಾರಿ ಶರತ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೊರೊನಾ ಸೋಂಕಿನಿಂದ‌ ಮೃತರಾದ ಕಲಬುರಗಿಯ 76 ವರ್ಷದ ವಯೋವೃದ್ಧನ ಮಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ತಿಳಿಸಿದ್ದಾರೆ.

ಇದೇ ಮಾರ್ಚ್ 10 ರಂದು ವೃದ್ಧರೊಬ್ಬರು ವಯೋಸಹಜ ಕಾಯಿಲೆಯ ಜತೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ. ಇದರಿಂದ ಕಲಬುರಗಿ ರೆಡ್ ಅಲರ್ಟ್ ಆಗಿ ಮಾರ್ಪಟ್ಟಿತ್ತು. ಮೃತನ ನೇರ ಸಂಪರ್ಕದಲ್ಲಿ ಬಂದಿದ್ದ ಆತನ 45 ವರ್ಷದ ಮಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಕಲಬುರಗಿ ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಐಸೋಲೇಷನ್ ವಾರ್ಡ್ ನಲ್ಲಿಟ್ಟು ತೀವ್ರ ನಿಗಾದಡಿ ಚಿಕಿತ್ಸೆ ನೀಡಲಾಗಿತ್ತು.

ಚಿಕಿತ್ಸೆಯ 14 ದಿನಗಳ ನಂತರ ಈ ಮಹಿಳೆಗೆ ಕೋವಿಡ್-19 ಪರೀಕ್ಷೆ ಮಾಡಿದಾಗ ನೆಗೆಟಿವ್ ಕಂಡುಬಂದಿದೆ. 24 ಗಂಟೆ‌ ನಂತರ‌ ಮತ್ತೊಮ್ಮೆ ಪರೀಕ್ಷಿಸಿದಾಗ ಸಹ ನೆಗೆಟಿವ್ ವರದಿ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?