NEWSನಮ್ಮರಾಜ್ಯರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ನೀಡಿದರೆ ಇವರು ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆ: ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ನೀಡಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್‌ ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ಬಗ್ಗೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

ಬಿಜೆಪಿ ಮತ್ತು ದಳದವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು. ಅವರ ಈ ಜನವಿರೋಧಿ ಬುದ್ಧಿಯನ್ನು ಮತದಾರರಿಗೆ ಮುಟ್ಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲುಸುವುದಾಗಲಿ, ಕಡಿಮೆ ಮಾಡುವುದಾಗಲಿ ಯಾವುದನ್ನೂ ಸಹ ಕಾಂಗ್ರೆಸ್‌ ಸರ್ಕಾರ ಮಾಡುವುದಿಲ್ಲ ಎಂದು ಮನವರಿಕೆ ಮಾಡಿಕೊಡಬೇಕು ಎಂದರು.

ಬ್ಲಾಕ್‌, ಜಿಲ್ಲಾ ತಾಲೂಕು ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ಮತ್ತು ನಾಯಕರು ಬೂತ್‌ ಮಟ್ಟದಿಂದ ಗ್ಯಾರಂಟಿ ಯೋಜನೆಗಳ ಸಾಧಕ- ಭಾದಕಗಳನ್ನು ಕಡ್ಡಾಯವಾಗಿ ತಿಳಿದುಕೊಂಡು, ಜನರಿಗೆ ಆಗುತ್ತಿರುವ ಅನಾನುಕೂಲ ಮತ್ತು ಅನುಕೂಲ ಎರಡನ್ನೂ ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಇಲ್ಲವೇ ಎಂದು ಖುದ್ದಾಗಿ ತಿಳಿಯಲು ಮಂತ್ರಿಗಳಿಗೆ ಸೂಚನೆ ನೀಡಲಾಗಿದೆ ಈ ಬಗ್ಗೆ ಕಾರ್ಯಕರ್ತರು ಕೂಡ ತಿಳಿಸಬೇಕು ಎಂದರು.

ಕಾಂಗ್ರೆಸ್​ ಸಂಸ್ಥಾಪಕರ ದಿನದಂದು ಪಕ್ಷದ ವತಿಯಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಸಮೀಕ್ಷೆ ಮಾಡಲು ಸಮಿತಿ ರಚನೆ ಮಾಡಲಾಗುವುದು. ಮುಂದಿನ ನಾಲ್ಕು ವರ್ಷಗಳಲ್ಲಿ ಯಾರು ಇರುತ್ತಾರೆ ಎನ್ನುವುದೇ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬವೂ ತಿಂಗಳಿಗೆ 5 ಸಾವಿರಕ್ಕೂ ಹೆಚ್ಚು ಹಣವನ್ನು ಉಳಿತಾಯ ಮಾಡುತ್ತಿದೆ. ಇಂತಹ ಚಿನ್ನದ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಜನರಿಗೆ ಕಾರ್ಯಕರ್ತರು ಮನವರಿಕೆ ಮಾಡಬೇಕು ಎಂದು ಕರೆ ನೀಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು