NEWSನಮ್ಮರಾಜ್ಯ

ಕುಟೀರ, ಭಾಗ್ಯ, ಅಮೃತ ಜ್ಯೋತಿ ಫಲಾನುಭವಿಗಳ 389 ಕೋಟಿ ರೂ. ಬಾಕಿ ವಿದ್ಯುತ್‌ ಬಿಲ್‌ ಮನ್ನಾ: ಕೆ.ಜೆ. ಜಾರ್ಜ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಪ್ರಮುಖ ಮೂರು ವಿದ್ಯುತ್ ಯೋಜನೆಗಳ ಫಲಾನುಭವಿಗಳ 389 ಕೋಟಿ ರೂಪಾಯಿ ಬಾಕಿ ಮೊತ್ತವನ್ನು ಮನ್ನಾ ಮಾಡಲು ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಡವರಿಗೆ ನೀಡುತ್ತಿರುವ ‘ಕುಟೀರಜ್ಯೋತಿ’, ‘ಭಾಗ್ಯಜ್ಯೋತಿ’ ಮತ್ತು ‘ಅಮೃತಜ್ಯೋತಿ’ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ಅಥವಾ ಹೆಚ್ಚಿನ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯುತ್ತಿದ್ದ ಫಲಾನುಭವಿಗಳಿಗೆ 389 ಕೋಟಿ ರೂ.ಗಳ ಬಾಕಿಯನ್ನು ಮನ್ನಾ ಮಾಡಲಾಗುವುದು ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಈ ಮೂರು ಪ್ರಮುಖ ಯೋಜನೆಗಳನ್ನು ನೂತನ ‘ಗೃಹ ಜ್ಯೋತಿ’ ಯೋಜನೆ ಜತೆಗೆ ವಿಲೀನ ಮಾಡಿಕೊಂಡಿದೆ. ವಸತಿ ವಿದ್ಯುತ್ ಸಂಪರ್ಕಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಇದರೊಂದಿಗೆ ಇದೀಗ ಬಾಕಿ ಬಿಲ್ ಅನ್ನು ಮನ್ನಾ ಮಾಡಲಿದೆ ಎಂದು ವಿವರಿಸಿದರು.

ಇನ್ನು ಇದರ ಜತೆಗೆ ರಾಜ್ಯದಲ್ಲಿ ಈ ಹಿಂದೆ ‘ಕುಟೀರ ಜ್ಯೋತಿ’ ಹಾಗೂ ‘ಭಾಗ್ಯ ಜ್ಯೋತಿ’ ಯೋಜನೆಯ ಫಲಾನುಭವಿಗಳಿಗೆ 40 ಹಾಗೂ ‘ಅಮೃತ ಜ್ಯೋತಿ’ ಫಲಾನುಭವಿಗಳು 75 ಯೂನಿಟ್‌ ವಿದ್ಯುತ್‌ಅನ್ನು ಉಚಿತವಾಗಿ ನೀಡಲಾಗುತ್ತಿತ್ತು. ಈಗ 40 ಯೂನಿಟ್ ಪಡೆಯುತ್ತಿರುವವರಿಗೆ 50 ಯೂನಿಟ್ ಜತೆಗೆ 10 ಯೂನಿಟ್ ಸೇರಿಸಲಾಗುತ್ತಿದೆ. ಅಲ್ಲದೆ 75 ಯೂನಿಟ್ ಪಡೆಯುವವರಿಗೆ 75 ಯೂನಿಟ್ ಒದಗಿಸಲು ನಿರ್ಧರಿಸಿದ್ದೇವೆ ಎಂದರು.

ಈಗಾಗಲೇ ಈ ಶೇ.10ರಷ್ಟು ಹೆಚ್ಚುವರಿಯಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದ ಅವರು, ವಿಲೀನಗೊಂಡ ‘ಕುಟೀರಜ್ಯೋತಿ’, ‘ಭಾಗ್ಯಜ್ಯೋತಿ’ ಹಾಗೂ ‘ಅಮೃತ ಜ್ಯೋತಿ’ ಯೋಜನೆಗಳ ಫಲಾನುಭವಿಗಳ ₹389 ಕೋಟಿ ಭಾರಿ ಮೊತ್ತದ ಬಾಕಿ ಇತ್ತು. ಅದನ್ನು ಮನ್ನಾ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇತ್ತೀಚೆಗೆ ಚರ್ಚಿಸಿದ್ದೇವೆ. ಈ ಕುರಿತು ಸರ್ಕಾರ ಒಪ್ಪಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್‌ಗೆ ₹3.17 ದರವನ್ನು ನಿಗದಿಪಡಿಸಿದೆ. ತುಮಕೂರು ಜಿಲ್ಲೆಯ ಪಾವಗಡದ ಅನೇಕ ರೈತರು ಸೌರ ವಿದ್ಯುತ್ ಉತ್ಪಾದಿಸುವವರಿಗೆ 8,000 ಎಕರೆ ಭೂಮಿ ನೀಡಲು ಮುಂದೆ ಬಂದಿದ್ದಾರೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಬೇಸಿಗೆ ವೇಳೆ 16,000 ಮೆಗಾ ವ್ಯಾಟ್ ವರೆಗೆ ವಿದ್ಯುತ್ ಬೇಡಿಕೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಇದು ಹಾಲಿ ಬಳಕೆಯಾಗುತ್ತಿರುವ ವಿದ್ಯುತ್‌ ಗಿಂತಲೂ ಅಧಿಕ ಪ್ರಮಾಣ ಎಂದ ಸಚಿವರು, ಬೇಡಿಕೆಯಷ್ಟು ವಿದ್ಯುತ್‌ ಪೂರೈಕೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ. ಹೆಚ್ಚು ವಿದ್ಯುತ್ ಉತ್ಪಾದಿಸುವ ಜತೆಗೆ ಪಂಜಾಬ್ ಸೇರಿದಂತೆ ಬೇರೆಡೆಯಿಂದ ವಿದ್ಯುತ್ ಪಡೆಯುತ್ತಿದ್ದೇವೆ. ರೈತರಿಗೆ ನಿರಂತರವಾಗಿ ಏಳು ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ