NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಶತಕೋಟಿ ಸಂಭ್ರಮ – ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕ ದಿವಾಳಿ ಆಗಲ್ಲ- ಪ್ರಧಾನಿ ಮೋದಿಗೆ ಸಿಎಂ ಗುದ್ದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ “ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ” ಹಾಗೂ ಅಪಘಾತ ರಹಿತ ಸಾರಿಗೆ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ, ಪ್ರಶಸ್ತಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರ ಬಂದಮೇಲೆ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ತಿಳಿಸಿದರು.

ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು.
ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದರು.

ಬಸ್ ಪ್ರಯಾಣಿಕರಲ್ಲಿ ಶೇ.55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ.

ಇದರ ಜತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದು ವಿಪಕ್ಷದವರ ವಿರುದ್ಧ ಕಿಡಿಕಾರಿದರು.

ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.

ಮುಖ್ಯಮಂತ್ರಿಗಳು ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ