CrimeNEWSನಮ್ಮಜಿಲ್ಲೆ

ಅಕ್ರಮ ಸಂಬಂಧ ಹೊಂದಿರುವ ಅನುಮಾನ: ದೊಣ್ಣೆಯಿಂದ ಹೊಡೆದು ಪತ್ನಿಯ ಕೊಲೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇವಳು ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನಗೊಂಡ ಪತಿ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ತಮ್ಮನಾಯಕನಹಳ್ಳಿಯಲ್ಲಿ ನಡೆದಿದೆ.

ತಮ್ಮನಾಯಕನಹಳ್ಳಿಯ ನಿವಾಸಿ ಲಕ್ಷ್ಮಮ್ಮ (40) ಪತಿಯಿಂದಲೇ ಕೊಲೆಯಾದವರು. 45 ವರ್ಷದ ಮಹದೇವಯ್ಯ ಪತ್ನಿಯನ್ನು ಹತ್ಯೆಗೈದ ಪತಿ.

ದೊಣ್ಣೆಯಿಂದ ಲಕ್ಷ್ಮಮ್ಮನನ್ನು ಹೊಡೆದು ಕೊಂದಿದ್ದಾನೆ ಈ ಪಾಪಿ ಮಹದೇವಯ್ಯ. ಈ ದಂಪತಿಗೆ ಆರು ಮಂದಿ ಮಕ್ಕಳಿದ್ದು, ಮಹದೇವಯ್ಯ ಆನೇಕಲ್​ನ ಸ್ಟ್ರೈಡ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಪತ್ನಿ ಲಕ್ಷ್ಮಮ್ಮ ಗಾರೆ ಕೆಲಸ ಮಾಡಿಕೊಂಡಿದ್ದಳು.

ಆದರೆ ಮಹದೇವಯ್ಯಗೆ ಗಾರೆ ಕೆಲಸ ಮಾಡುವ ವ್ಯಕ್ತಿಯ ಜೊತೆ ಲಕ್ಷ್ಮಮ್ಮ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ. ಈ ವಿಚಾರಕ್ಕೆ ಹಲವು ಬಾರಿ ಲಕ್ಷ್ಮಮ್ಮ ಹಾಗೂ ಮಹದೇವಯ್ಯ ನಡುವೆ ಗಲಾಟೆ ಕೂಡ ನಡೆದಿತ್ತು.

ಗಂಡ -ಹೆಂಡತಿ ಜಗಳ ಇಡೀ ತಮ್ಮನಾಯಕನಹಳ್ಳಿ ಗ್ರಾಮದ ಜನಕ್ಕೆ ತಿಳಿದಿತ್ತು. ಜನರು ಅಕ್ರಮ ಸಂಬಂಧದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದರು. ಇದರಿಂದ ಮನನೊಂದಿದ್ದ ಮಹದೇವಯ್ಯ ಮನೆಯಲ್ಲಿ ಪತ್ನಿ ಮಲಗಿದ್ದಾಗಲೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಆನೇಕಲ್‌ ‌ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ