NEWSನಮ್ಮರಾಜ್ಯಶಿಕ್ಷಣ-

ನಮಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಧ್ವನಿಯಾಗಿ ಎಎಪಿ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್ ಎಂದು ಪ್ರಶ್ನೆ ಮಾಡುವ ಮೂಲಕ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಧ್ವನಿಯಾಗಿ ಆಮ್ ಆದ್ಮಿ ಪಕ್ಷ ಅಭಿಯಾನ ಆರಂಭಿಸುತ್ತಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.

ಈ ಕುರಿತು ಇಂದು (ಸೋಮವಾರ ನ.27) ನಗರದ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್‌ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳೂ ಪ್ರತಿಭಾನ್ವಿತರಾಗಿದ್ದಾರೆ. ಒಂದೇ ವಿಷಯವನ್ನು ಅಭ್ಯಾಸ ಮಾಡಿರುತ್ತಾರೆ. ಕಲಿಕೆಯ ಗುಣಮಟ್ಟವೂ ಒಂದೇ ಆಗಿರುತ್ತದೆ. ಎಲ್ಲ ವಿಚಾರಗಳಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಸರಿಸಮನಾಗಿದ್ದಾರೆ. ಆದರೂ ಕ್ಯಾಂಪಸ್ ಸೆಲೆಕ್ಷನ್‌ಗೆ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಕಂಪನಿಗಳು ಮಣೆಹಾಕುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಹೇಳಿದರು.

ಇನ್ನು ಮುಂದೆಯಾದರೂ ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂಬುದು ಆಮ್ ಆದ್ಮಿ ಪಕ್ಷದ ಪ್ರಮುಖ ಒತ್ತಾಯವಾಗಿದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕ್ಯಾಂಪಸ್ ಸೆಲೆಕ್ಷನ್‌ಗೆ ಸಿದ್ಧಗೊಳಿಸುವುದು ಹಾಗೂ ಕಂಪನಿಗಳು ಖಾಸಗಿ ಕಾಲೇಜುಗಳಿಗೆ ನೀಡುವ ಮಾನ್ಯತೆಯಂತೆ ಸರ್ಕಾರಿ ಕಾಲೇಜುಗಳಿಗೂ ಸಮನಾಗಿ ಆದ್ಯತೆ ನೀಡುವಂತೆ ಆಯಾ ಜಿಲ್ಲಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂಬುವುದು ನಮ್ಮ ಪಕ್ಷದ ಒತ್ತಾಯವಾಗಿದೆ ಎಂದು ತಿಳಿಸಿದರು.

ಈ ಬಗ್ಗೆ ಸರ್ಕಾರ ಮತ್ತು ಖಾಸಗಿ ಕಂಪನಿಗಳ ಗಮನ ಸೆಳೆಯುವ ಸಲುವಾಗಿಯೇ ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷವು ರಾಜ್ಯಾದ್ಯಂತ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಪರವಾಗಿ ಅಭಿಯಾನವನ್ನು ಹಮ್ಮಿಕೊಂಡಿದೆ. ಹೀಗಾಗಿ ಬರುವ ಡಿಸೆಂಬರ್ 1ರಿಂದ 4ರವರೆಗೆ ಆಮ್ ಆದ್ಮಿ ಪಕ್ಷದ ಯುವ ಘಟಕ ರಾಜ್ಯಾದ್ಯಂತ 4 ದಿನಗಳ ಅಭಿಯಾನ ನಡೆಸಲಿದೆ ಎಂದು ವಿವರಿಸಿದರು.

ಎಲ್ಲೆಲ್ಲಿ ಅಭಿಯಾನ ನಡೆಯಲಿದೆ? ಪ್ರಮಖವಾಗಿ ಡಿ.1ರಂದು ರಾಮನಗರ, ಡಿ.2ರಂದು ಮಂಡ್ಯ, ಡಿ.3ರಂದು ಮೈಸೂರು ಹಾಗೂ ಡಿ.4ರಂದು ಚಾಮರಾಜನಗರದಲ್ಲಿ ಅಭಿಯಾನವನ್ನು ನಡೆಸಲಿದೆ. ಉಳಿದಂತೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಮಟ್ಟದ ಅಭಿಯಾನಗಳನ್ನು ನಡೆಸಲಿದ್ದಾರೆ ಎಂದರು.

ಅಭಿಯಾನದ ಮೂಲಕ ಜಿಲ್ಲಾಧಿಕಾರಿಗಳ ಗಮನವನ್ನು ಸೆಳೆದು, ಸರ್ಕಾರಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಆಯ್ಕೆಗೆ ಪರಿಗಣಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳವಂತೆ ಒತ್ತಡ ಹೇರಲಾಗುವುದು ಎಂದು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ