NEWSನಮ್ಮರಾಜ್ಯಸಿನಿಪಥ

ನ.29ರಂದು ಉದ್ಯಮಿ ವಿಜಯ್ ಜೊತೆ ನಟಿ ಪೂಜಾ ಗಾಂಧಿ ಮಂತ್ರ ಮಾಂಗಲ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಗಾರು ಮಳೆ ಸಿನಿಮಾ ಮೂಲಕ ಅಭಿಮಾನಿಗಳಿಗೆ ಚಿರಪರಿಚಿತರಾದ ನಟಿ ಪೂಜಾ ಗಾಂಧಿ ನಾಳೆ ಅಂದರೆ ನ.29ರಂದು (ಮಂತ್ರ ಮಾಂಗಲ್ಯ) ಸರಳ ವಿವಾಹವಾಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅವರು ಅಧಿಕೃತವಾಗಿ ಎಲ್ಲಿಯೂ ಹೇಳಿಲ್ಲವಾದರೂ, ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿ ಜೊತೆ ಅವರು ಭಾರಿ ಸರಳವಾಗಿ ಮದುವೆ ಆಗುತ್ತಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿ ಮದುವೆಗೆ ಸಿದ್ಧತೆ ನಡೆದಿದ್ದು, ಉದ್ಯಮಿ ಹಾಗೂ ಇವರಿಗೆ ಕನ್ನಡ ಕಲಿಸಿಕೊಟ್ಟ ವಿಜಯ್ ಘೋರ್ಪಡೆ ಎಂಬುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆ‍ಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಬಂಗಾಳಿ ಮೂಲದ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.

ಅಂದಹಾಗೆ ನಟಿ ಪೂಜಾ ಗಾಂಧಿಗೆ ಕನ್ನಡ ಕಲಿಸಿದ್ದು ವಿಜಯ್ ಅವರೇ. ಬಂಗಾಳಿ ಮೂಲದವರಾದ ಪೂಜಾ ಗಾಂಧಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುವಾಗ ಕನ್ನಡ ಬರುತ್ತಿರಲಿಲ್ಲ. ಆ ಬಳಿಕ ವಿಜಯ್ ಸಹಾಯ ಪಡೆದುಕೊಂಡಿದ್ದರಂತೆ. ಇದೀಗ ಅಚ್ಚ ಕನ್ನಡವನ್ನು ಸ್ವಚ್ಛವಾಗಿ ಮಾತನಾಡುತ್ತಿರುವ ಪೂಜಾ, ಸಿನಿಮಾದಲ್ಲಿ ನಟನೆ ಮಾಡುತ್ತಾ ಡಬ್ಬಿಂಗ್‌ ಕೂಡ ತಾವೇ ಮಾಡುತ್ತಿದ್ದಾರೆ.

ಈ ಹಿಂದೆ 2012ರಲ್ಲಿ ಪೂಜಾ ಗಾಂಧಿ ಕೈಗಾರಿಕೋದ್ಯಮಿ ಆನಂದ್‌ ಗೌಡ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ಎಂಗೇಜ್‌ಮೆಂಟ್‌ ಆದ ಕೆಲ ತಿಂಗಳಲ್ಲೇ ಈ ಮದುವೆ ಪ್ರಸ್ತಾಪ ಮುರಿದುಬಿದ್ದಿತ್ತು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ