CrimeNEWSನಮ್ಮಜಿಲ್ಲೆ

ಮೈಸೂರು ದಸರಾದಲ್ಲಿ 8ಬಾರಿ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಅರ್ಜುನ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಯಿಂದ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಅರ್ಜುನ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಸೋಮವಾರ (ಡಿ.4) ನಡೆದಿದೆ.

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಉಪಟಳಕ್ಕೆ ಬ್ರೇಕ್‌ ಹಾಕಲು ನವೆಂಬರ್ 24ರಿಂದ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಂದು ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಅರಣ್ಯದಲ್ಲಿ ಕಾಡಾನೆ ಹಿಡಿದು, ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿದೆ.

ಇನ್ನು ಒಬ್ಬಂಟಿಯಾದ ಅರ್ಜುನ ಒಂಟಿಸಲಗದ ಜತೆ ಕಾಳಗಕ್ಕಿಳಿದ್ದಾನೆ. ಈ ಎರಡೂ ಮದಗಜಗಳ ಕಾಳಗದಲ್ಲಿ ಅರ್ಜುನ ಸಾವನ್ನಪ್ಪಿದ್ದಾನೆ. ಇವರೆಡು ಆನೆಗಳು ಕಾಳಗಕ್ಕೆ ಬೀಳುತ್ತಿದ್ದಂತೆ ಮಾವುತರು ಅರ್ಜುನನ ಮೇಲಿನಿಂದ ಇಳಿದು ಓಡಿದ್ದಾರೆ. ಬಳಿಕ ಅರ್ಜುನನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಮಾವುತ ವಿನೋದ್ ಕಂಗಾಲಾಗಿ ಗೋಳಾಡಿದ್ದಾರೆ. ಸಾವಿನ ಆಘಾತದಿಂದ ಮಾವುತ ವಿನೋದ್ ಕಾಡಿನಲ್ಲೇ ಅಸ್ವಸ್ಥರಾಗಿದ್ದು, ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಂಬುಲೆನ್ಸ್‌ನಲ್ಲಿ ಚಿಕಿತ್ಸೆಗಾಘಿ ಆಸ್ಪತ್ರೆಗೆ ರವಾನಿಸಲಾಯಿತು.

ಅರ್ಜುನನ ಮೃತದೇಹವನ್ನು ತಬ್ಬಿಕೊಂಡು ಅಳುತ್ತಿರುವ ಮಾವುತರ ಆಕ್ರಂದನ ಮುಗಿಲು ಮುಟ್ಟಿದೆ. ಮಗುವಿನಂತೆ ಜತೆಗಿದ್ದ ಅರ್ಜುನನ್ನು ಕಳೆದುಕೊಂಡ ಮಾವುತರು ಕಣ್ಣೀರು ಹಾಕುತ್ತಿದ್ದು, ಮಾವುತರ ಗೋಳಾಟ ಕಂಡು ಸ್ಥಳದಲ್ಲಿದ್ದವರು ನೀರವ ಮೌನಕ್ಕೆ ಜಾರಿದರು. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾರ್ಯದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ದಸರಾ ಆನೆ ಅರ್ಜುನನ ಸಾವಿನ ಬಗ್ಗೆ ಡಿಎಫ್‌ಪೊ ಮೋಹನ್ ಕುಮಾರ್ ಮಾಹಿತಿ ನೀಡಿದ್ದು, ಕಾಡಾನೆ‌ ಸೆರೆ ಹಿಡಿಯುವ ಕಾರ್ಯಾಚರಣೆ ಯಸಳೂರು ವಲಯದಲ್ಲಿ ನಡೆಯುತ್ತಿತ್ತು. ನಡುತೋಪಿನಲ್ಲಿ ಬೆಳಗ್ಗೆಯಿಂದಲೇ ಕಾಡಾನೆಗಳನ್ನು ಗುರುತಿಸಿ ಅದನ್ನು ನಿಗಾವಹಿಸಲಾಗುತ್ತಿತ್ತು. ಕಾಡಾನೆಗಳು ಇರುವ ಸ್ಥಳಕ್ಕೆ ಹೋದಾಗ 12 ಆನೆಗಳು ಇದ್ದವು. ಗುಂಪನ್ನು ಗಂಡಾನೆಯೊಂದು ಲೀಡ್ ಮಾಡುತ್ತಿತ್ತು.

ನಮ್ಮ ಸಾಕಾನೆಗಳು ಹೋದಾಗ ಚಾರ್ಜ್ ಮಾಡೋದಕ್ಕೆ ಬಂತು. ಡಾಕ್ಟರ್ ಗಂಡಾನೆ ಮತ್ತಿನಲ್ಲಿರುವುದನ್ನು ಗಮನಿಸಿದ್ದಾರೆ. ನಮ್ಮ ಅರ್ಜುನ ಆನೆ ಅದರ ಜತೆ ಕಾದಾಟಕ್ಕಿಳಿದಿದೆ. ಉಳಿದ ಆನೆಗಳೆಲ್ಲ ವಾಪಸ್‌ ಆದವು. ಕಾಡಾನೆ ಅರ್ಜುನನ ಮೇಲೆ ದಾಳಿ ಮಾಡಿತು. ದಾಳಿ ಮಾಡಿದ ಕೂಡಲೇ ನಮ್ಮ ಸಿಬ್ಬಂದಿ ಸಾಕಾನೆಗಳು ವಾಪಸ್‌ ಬಂದವು. ಅರ್ಜುನನ ಮೇಲಿದ್ದ ಡಾಕ್ಟರ್ ಹಾಗೂ ಮಾವುತ ಕೂಡಾ ಇಳಿದು ಬಂದರು. ಕಾಡಾನೆ ಸ್ವಲ್ಪ ಬಲಿಷ್ಟವಾಗಿತ್ತು, ಅಲ್ಲದೇ ಕೋರೆಗಳು ಚೂಪಾಗಿದ್ದವು. ಕಾದಾಟದಲ್ಲಿ ಅರ್ಜುನ ಅಸುನೀಗಿದ್ದಾನೆ ಎಂದು ತಿಳಿಸಿದರು.

ಈ ಬಗ್ಗೆ ನಮ್ಮ‌ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಮುಂದಿನ ಕ್ರಮದ ಬಗ್ಗೆ ಸೂಚನೆ ಬಂದ ತಕ್ಷಣ ನಿರ್ವಹಿಸುತ್ತೇವೆ. ಮೃತಪಟ್ಟ ಭಾಗದಲ್ಲಿ ಅರ್ಜುನನ ಬಳಿಗೆ ನಾವು ಹೋಗುವುದಕ್ಕೆ ಆಗುತ್ತಿಲ್ಲ. ಅದರ ಸುತ್ತಮುತ್ತಲಲ್ಲೇ ಕಾಡಾನೆಗಳ ಓಡಾಡುತ್ತಿದೆ ಎಂದು ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು