CrimeNEWSನಮ್ಮಜಿಲ್ಲೆಮೈಸೂರು

ಭ್ರೂಣ ಹತ್ಯೆ ಮಾಹಿತಿ ನೀಡಿದರೆ ₹50 ಸಾವಿರ ಬಹುಮಾನ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಜಿಲ್ಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಮೈಸೂರು ನಗರ ಹಾಗೂ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ. ಆದರೂ ಕಣ್ತಪ್ಪಿಸಿ ಅಕ್ರಮ ಎಸಗಿದ ಬಗ್ಗೆ ಮಾಹಿತಿ ನೀಡಿದರೆ ಅಂತಹವರಿಗೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ರೂ. ನಗದು ಬಹುಮಾನವಾಗಿ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಮೈಸೂರಿನಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮೈಸೂರಿನ ಮಾತಾ ಆಸ್ಪತ್ರೆಯಲ್ಲೇ ಆಪರೇಷನ್ ನಡೆಯುತಿತ್ತು ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ ತಾಲೂಕು ಆರೋಗ್ಯಧಿಕಾರಿ ಡಾ.ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿ ಅವರನ್ನು ಅಮಾನತು ಮಾಡಲಾಗಿತ್ತು.

ಈಗ ಈ ಪ್ರಕರಣ ಹೆಚ್ಚು ತೀವ್ರತೆ ಪಡೆಯುತ್ತಿದ್ದು, ಮೈಸೂರು ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಟಾಸ್ಕ್ ಪೋರ್ಸ್ ನಿಂದ ಎಲ್ಲಾ ಕಡೆ ನಿಗಾ ಇಡಲಾಗಿದೆ. ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುತ್ತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದು, ಸಾರ್ವಜನಿಕರು ಇದನ್ನು ಹೇಗೆ ಪರಿಗಣಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಇನ್ನು ಅಕ್ರಮ ಎಸಗುವ ಸ್ಕ್ಯಾನಿಂಗ್ ಸೆಂಟರ್‌ಗಳ ಬಗ್ಗೆ ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದಲ್ಲದೆ, ಭ್ರೂಣ ಪತ್ತೆ, ಹತ್ಯೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ದೊಡ್ಡಮಟ್ಟದ ಕಾರ್ಯಾಗಾರದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಡಾ.ಕುಮಾರಸ್ವಾಮಿ ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ