Wednesday, October 30, 2024
NEWSಆರೋಗ್ಯನಮ್ಮಜಿಲ್ಲೆ

ಮೈಸೂರು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್‌- ನಿರಾಶ್ರಿತರಿಗೆ ಹೊದಿಕೆ ವಿತರಣಾ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸ್ವಾತಂತ್ರ್ಯ ಬಂದು 76 ವರ್ಷಗಳೇ ಕಳೆದು ಹೋಗಿದ್ದರೂ ಇವತ್ತಿಗೂ ನಮ್ಮ ನಿಮ್ಮ ನಡುವೆ ಸೂರಿಲ್ಲದೆ ರಸ್ತೆ ಬದಿಯಲ್ಲಿ, ಬಸ್ ನಿಲ್ದಾಣಗಳಲ್ಲಿ ವಾಸ್ತವ್ಯ ಹೂಡುವ ನಿರಾಶ್ರಿತರು ಅಲ್ಲಲ್ಲಿ ಕಾಣಸಿಗುತ್ತಾರೆ. ಅವರಿಗೆ ಬದುಕು ಕಟ್ಟಿಕೊಡುವ ಕೆಲಸ ಇಲ್ಲಿಯವರೆಗೆ ಆಗದ ಕಾರಣ ಇವತ್ತಿಗೂ ನಿರಾಶ್ರಿತರು ನಮ್ಮ ಮುಂದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ನಡುವೆ ಮೈಸೂರನ್ನು ಭಿಕ್ಷುಕರ ಮುಕ್ತ ನಗರ ಮಾಡುವ ಚಿಂತನೆ ಮಾಡಲಾಯಿತಾದರೂ ಅದು ಯಶಸ್ವಿಯಾಗಲಿಲ್ಲ. ಹೀಗಾಗಿ ಇವತ್ತಿಗೂ ಬೀದಿ ಬದಿಯಲ್ಲಿ ನಿರಾಶ್ರಿತರು ಕಂಡು ಬರುತ್ತಿದ್ದು, ಅವರಿಗೆ ಸೂರು ಕಲ್ಪಿಸಲು ಸಾಧ್ಯವಾಗದಿದ್ದರೂ ಬರಲಿರುವ ಚಳಿಯನ್ನು ತಡೆಯಲು ಅಗತ್ಯವಿರುವ ಹೊದಿಯಕೆಯನ್ನಾದರೂ ನೀಡಬೇಕೆಂಬ ಉದ್ದೇಶ ಮೈಸೂರಿನ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್‌ನದ್ದಾಗಿದೆ.

ಈ ಬಾರಿ ಮೈಸೂರು ನಗರದಲ್ಲಿ ರಾತ್ರಿ ವೇಳೆ ಬೀದಿಬದಿಯಲ್ಲಿ ಮಲಗುವ ನಿರಾಶ್ರಿತರನ್ನು ಗುರುತಿಸಿ ಅವರಿಗೆ ಹೊದಿಕೆ ವಿತರಿಸುವ ಅಭಿಯಾನವನ್ನು ಆರಂಭಿಸಲಾಗಿದೆ. ಸುಮಾರು 45 ದಿನಗಳ ಕಾಲ ನಡೆಯಲಿರುವ ಅಭಿಯಾನದಲ್ಲಿ ಪ್ರತಿದಿನ ರಾತ್ರಿ 11 ರಿಂದ 12ಗಂಟೆವರೆಗೆ ನಗರದ ವಿವಿಧ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿರುವ ಅಸಹಾಯಕರಿಗೆ ಹೊದಿಕೆ ವಿತರಣಾ ಮಾಡಲಾಗುತ್ತದೆ.

ಬೀದಿಬದಿಯಲ್ಲಿ ಜೀವನ ಸಾಗಿಸಿ ರಾತ್ರಿ ಹೊತ್ತು ರಸ್ತೆಯಲ್ಲಿ ಮಲಗುವ ನಿರ್ಗತಿಕರು, ಬೀದಿ ಬದಿ ವ್ಯಾಪಾರಸ್ಥರು ಮುಂಜಾನೆಯೇ ಸ್ವಚ್ಛತೆ ಮಾಡುವ ಪೌರಕಾರ್ಮಿಕರು ಹಾಗೂ ಬಡವರ್ಗದವರಿಗೆ ಚಳಿಗಾಲ ಹಾಗೂ ವಿಪರೀತ ತಂಡಿಗಾಳಿ ವಾತಾವರಣದ ಪರಿಣಾಮ ಆರೋಗ್ಯ ಸಮಸ್ಯೆ ಬರದಂತೆ ಹೊದಿಕೆ ವಿತರಣಾ ಕಾರ್ಯಕ್ರಮ ಆರಂಭಿಸಲಾಗಿದೆ.

ಈಗಾಗಲೇ ಮೈಸೂರು ನಗರದ ಕೆ.ಆರ್.ಆಸ್ಪತ್ರೆ ಸುತ್ತಮುತ್ತ ಮಲಗಿರುವ ಸಾರ್ವಜನಿಕರಿಗೆ ಹೊದಿಕೆ ವಿತರಣೆ ಮಾಡಲಾಗಿದ್ದು, ಈ ಅಭಿಯಾನಕ್ಕೆ ಶಾಂತವೇರಿ ಗೋಪಾಲ್ ಗೌಡ ಆಸ್ಪತ್ರೆಯ ವ್ಯವಸ್ಥಾಪಕ ಡಾ. ಶುಶ್ರುತ ಗೌಡ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಮೈಸೂರಲ್ಲಿ ನಿರಾಶ್ರಿತರು, ಆಶಕ್ತರಲ್ಲಿ ಸ್ವಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಆದ ಕಾರಣ ಕಷ್ಟದಲ್ಲಿದ್ದೇವೆ ಸಹಾಯ ಮಾಡಿ ಎಂದು ಸಂಘಸಂಸ್ಥಗಳಿಗೆ ಅಥವಾ ಸರ್ಕಾರಕ್ಕೆ ಅರ್ಜಿ ಹಾಕಲ್ಲ ಅಥವಾ ಸರ್ಕಾರದವರೇ ಎಲ್ಲವನ್ನೂ ಸರಿದಾರಿಗೆ ತರೋದಕ್ಕೆ ಆಗುವುದಿಲ್ಲ.

ಇನ್ನು ಸಮಾಜವನ್ನು ಸರಿಪಡಿಸುವಲ್ಲಿ ಸಂಘ, ಸಂಸ್ಥೆಗಳ ಮತ್ತು ಸಾರ್ವಜನಿಕರ ಪಾತ್ರ ಬಹಳಮುಖ್ಯ, ಅಶಕ್ತರಿರುವ ಸ್ಥಳಕ್ಕೆ ಹೋಗಿ ಹೊದಿಕೆ ವಿತರಣೆ ಕಾರ್ಯಕ್ರಮ ನಡೆಯುವ ಮಾದರಿಯಲ್ಲೆ ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲು ಶ್ರಮಿಸೋಣ ಎಂದು ಹೇಳಿದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್ ಮಾತನಾಡಿ, ಸ್ನೇಹಿತರ ಸಹಕಾರದೊಂದಿಗೆ ಕಳೆದ ನಾಲ್ಕು ವರ್ಷದಿಂದ ನಿರಂತರವಾಗಿ ಡಿಸೆಂಬರ್ ಹಾಗೂ ಜನವರಿ ತಿಂಗಳಿನಲ್ಲಿ ಚಳಿಗಾಲ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿ ಅವರ ಸ್ಥಿತಿಗತಿಗಳನ್ನು ನೋಡಿ ಹೊದಿಕೆ ಯನ್ನು ವಿತರಿಸುತ್ತಾ ಬಂದಿದ್ದೇವೆ, ಜೊತೆಗೆ ಕೆಲವೊಂದು ಹಾಡಿಗಳಿಗೆ ಭೇಟಿ ಕೊಟ್ಟಿ ಹಾಡಿ ಜನಾಂಗದವರಿಗೂ ಹೊದಿಕೆಯನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಹೊದಿಕೆ ವಿತರಣೆ ವೇಳೆಯಲ್ಲಿ ಅಹಿಂದ ಮುಖಂಡರಾದ ನಜರ್ಬಾದ್ ನಟರಾಜ್, ಕಡಕೋಳ ಪಟ್ಟಣ ಪಂಚಾಯತ್ ಕಿರಿಯ ಆರೋಗ್ಯ ನಿರೀಕ್ಷಕರು ಮಂಜುನಾಥ್, ರುದ್ರಮೂರ್ತಿ, ಬೈರತಿ ಲಿಂಗರಾಜು ಇನ್ನಿತರ ಟ್ರಸ್ಟ್ ಸದಸ್ಯರು ಭಾಗಿಯಾಗಿದ್ದರು.

Leave a Reply

error: Content is protected !!
LATEST
ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ