CrimeNEWSನಮ್ಮರಾಜ್ಯ

NWKRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ವಿಜಯಪಥ ಸಮಗ್ರ ಸುದ್ದಿ

ಶಿರಸಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಿಂದ ಸ್ಥಳದಲ್ಲೇ ಐವರು ಮೃತಪಟ್ಟಿರುವುದು ತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಪಂಪ್ ಬಳಿ ಜರುಗಿದೆ.

ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿ ಅಸುನೀಗಿದ್ದಾರೆ. ಇನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ಅಪಘಾತದ ತೀವ್ರತೆಗೆ ಕಾರು ಹಾಗೂ ಬಸ್​​ ಸಂಪೂರ್ಣ ನಜ್ಜುಗುಜ್ಜಾಗಿವೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ