ಬೆಂಗಳೂರು: ದೀರ್ಘಕಾಲ ಕರ್ನಾಟಕದ ಕಲಾ ಸೇವೆ ಸಲ್ಲಿಸಿದ ಖ್ಯಾತ ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ ನಿಧನದ ಸುದ್ದಿ ತೀವ್ರ ನೋವು ತಂದಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.
ಅವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.