NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಅನುಕಂಪದ ಆಧಾರದ ಮೇಲೆ ನೇಮಕಾತಿ – 49 ಮಂದಿಗೆ ಆದೇಶ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕ.ರಾ.ಸಾ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದ್ದು, ಇಂದು (ಡಿ13) ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು.

ಬುಧವಾರ ಆಯೋಜಿಸಿದ್ದ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮಲ್ಲಿ NWKRTCಯ 49 ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದ ಸಚಿವರು ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿದರು.

ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಈಗ 49 ಮಂದಿ ನೇಮಕ ಮಾಡಿಕೊಂಡಿದ್ದು, ಉಳಿದವರಿಗೂ ಮುಂದಿನ ದಿನಗಳಲ್ಲಿ ನೌಕರಿ ನೀಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

NWKRTC ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್ ಸೇರಿದಂತೆ ಉನ್ನತ ಅಧಿಕಾರಿಗಳು ಹಾಗೂ ನೇಮಕಾತಿ ಆದೇಶ ಪತ್ರಪಡೆಯಲು ಬಂದಿದ್ದವರ ಜತೆ ಕುಟುಂಬದವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?