ಸಂಸದ ಪ್ರತಾಪ್ ಸಿಂಹ ಸಹೋದನಿಂದ ಕೋಟ್ಯಂತ ರೂ. ಮೌಲ್ಯದ ಮರಗಳ ಹನನ: ಕಾಂಗ್ರೆಸ್
ಬೆಂಗಳೂರು: ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಅಕ್ರಮವಾಗಿ ಕೋಟ್ಯಂತ ರೂಪಾಯಿ ಬೆಲೆಬಾಳುವ ಮರಗಳನ್ನು ಕಡಿದು ಸಾಗಿದ್ದಾರೆ ಎಂಬ ಆರೋಪಕ್ಕೆ ಸಿಲುಕಿದ್ದಾರೆ.
ಹೌದು! ಸಂಸದ ಪ್ರತಾಪ್‌ಸಿಂಹ ಸಂಸತ್ ಮೇಲಿನ ದಾಳಿಕೋರರಿಗೆ ಪಾಸ್ ನೀಡಿದ ಆರೋಪಕ್ಕೆ ಗುರಿಯಾದರೆ, ಇತ್ತ ಅವರ ಸಹೋದರ ವೃಕ್ಷ ಕರ್ಮಕಾಂಡದಲ್ಲಿ ಸಿಲುಕಿದ್ದಾರೆ. ನೂರಾರು ದೈತ್ಯ ಮರಗಳನ್ನು ಹನನ ಮಾಡುವ ಮೂಲಕ ಅಕ್ರಮವೆಸಗಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಹಾಸನ ಜಿಲ್ಲೆಯ ಬೇಲೂರು ಬಳಿ ಈ ಅಕ್ರಮ ನಡೆದಿದ್ದು, ಈ ಬಗ್ಗೆ ತಹಸೀಲ್ದಾರ್ ಅವರು ಮಿಂಚಿನ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಪ್ರಕರಣ ಬಯಲಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಆರೋಪಿಸಿದೆ.
ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ, ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಅಣ್ಣ @mepratap ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ.
ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್… pic.twitter.com/5m5ZYZrMDl
— Karnataka Congress (@INCKarnataka) December 23, 2023
ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬಿಸಿಯಾಗಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.