CrimeNEWSನಮ್ಮಜಿಲ್ಲೆ

KKRTC- ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್‌ ಪಲ್ಟಿ: ಚಾಲಕ, ಮೂವರು ಮಕ್ಕಳಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ತಾಲೂಕಿನ ಬೇವಿನಹಳ್ಳಿ ಗ್ರಾಮದ ಸಮೀಪದ ತಿರುವಿನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, 26 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಆಪಾರಾಗಿರುವ ಘಟನೆ ಮಂಗಳವಾರ ಜರುಗಿದೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಸಜ್ಜಲಗುಡ್ಡ ಗ್ರಾಮದ ಸರ್ಕಾರಿ ಶಾಲೆಯ 53 ಮಕ್ಕಳು, 6 ಶಿಕ್ಷಕರು ಬಸ್‌ನಲ್ಲಿ ಶಿಗ್ಗಾವಿ ತಾಲೂಕಿನ ಗೊಟಗೋಡಿ ಸ್ಥಳಕ್ಕೆ ಪ್ರವಾಸ ಹೊರಟಿದ್ದರು. ಎದುರಿಗೆ ಬಂದ ಕಾರನ್ನು ತಪ್ಪಿಸಲು ಹೋಗಿ ಬಸ್‌ ಪಲ್ಟಿಯಾಗಿದೆ.

ಗಂಭೀರ ಗಾಯಗೊಂಡ ಬಸ್‌ ಚಾಲಕ ಮಲ್ಲಪ್ಪ ಹಾಗೂ ಮೂವರು ವಿದ್ಯಾರ್ಥಿಗಳಿಗೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಗೊಂಡ 26 ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯವಾಗಿರುವ ವಿದ್ಯಾರ್ಥಿಗಳಿಗೆ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ‌ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಫ್‌.ಬಾರ್ಕಿ, ಎಸ್ಪಿ ಅಂಶುಕುಮಾರ, ಡಿಎಸ್‌ಪಿ ಎಂ.ಎಸ್‌.ಪಾಟೀಲ, ಸಿಪಿಐ ಆನಂದ ಒನಕುದ್ರೆ ಸೇರಿದಂತೆ ಶಿಕ್ಷಣ, ಸಾರಿಗೆ ಇಲಾಖೆ ಅಧಿಕಾರಿಗಳು, ಶಿಕ್ಷಕರು ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿ ಸಾಹಸ: ಬಸ್‌ ಪಲ್ಟಿ ಆಗಿ ಪಕ್ಕದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ ಭಾರ ಹಾಗೂ ಬಿದ್ದ ರಭಸಕ್ಕೆ ಕಂಬ ತುಂಡಾಗಿ ನೆಲಕ್ಕುರುಳಿದ್ದು, ಈ ವೇಳೆ ವಿದ್ಯುತ್‌ ಟ್ರಿಪ್‌ ಸಂಪರ್ಕ ಕಡಿತಗೊಂಡಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಈ ನಡುವೆ, ಬಸ್‌ನಲ್ಲಿದ್ದ 7ನೆ ತರಗತಿ ವಿದ್ಯಾರ್ಥಿ ಮಲ್ಲನಗೌಡ ಚಳಗೇರಿ ತುರ್ತು ನಿರ್ಗಮನದ ಬಾಗಿಲು ತೆರೆದು ಜಿಗಿದಿದ್ದಾನೆ. ಉಳಿದ ವಿದ್ಯಾರ್ಥಿಗಳನ್ನು ಹೊರ ತರಲು ಪ್ರಯತ್ನಿಸಿದ್ದಾನೆ. ಈ ವಿದ್ಯಾರ್ಥಿ ಶ್ರಮಕ್ಕೆ ಸಾರ್ವಜನಿಕರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ