CrimeNEWSದೇಶ-ವಿದೇಶ

ವಿಮಾನಗಳ ನಡುವೆ ಡಿಕ್ಕಿ: ಐವರು ಸಿಬ್ಬಂದಿ ಮೃತ- ಸಣ್ಣಪುಟ್ಟಗಾಯಗಳೊಂದಿಗೆ 379 ಪ್ರಯಾಣಿಕರ ರಕ್ಷಣೆ

ವಿಜಯಪಥ ಸಮಗ್ರ ಸುದ್ದಿ

ಟೋಕಿಯೋ: ಜಪಾನಿನ ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ ವಿಮಾನಗಳ ನಡುವೆ ಆದ ಡಿಕ್ಕಿಯಿಂದ ಭವಿಸಿದ ಅಗ್ನಿ ದುರಂತದಲ್ಲಿ ಐವರು ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಗಳವಾರ ಜಪಾನ್ ಏರ್‌ಲೈನ್ಸ್ ಜೆಟ್ ಕೋಸ್ಟ್ ಗಾರ್ಡ್ ವಿಮಾನಕ್ಕೆ ಪ್ರಯಾಣಿಕರ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಪ್ರಯಾಣಿಕ ವಿಮಾನದಲ್ಲಿದ್ದ ಎಲ್ಲ 367 ಪ್ರಯಾಣಿಕರು ಮತ್ತು 12 ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆದರೆ ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ ಆರು ಸಿಬ್ಬಂದಿಯಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹೊಕ್ಕೈಡೊದಿಂದ ಟೇಕಾಫ್‌ ಆದ JAL 516 ವಿಮಾನವು ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಲ್ಯಾಂಡ್‌ ಆಗುತ್ತಿದ್ದಾಗ ಹೊತ್ತಿ ಉರಿದಿದೆ. ಸದ್ಯ ವಿಮಾನ ಡಿಕ್ಕಿಯ ಬಳಿಕ ಬೆಂಕಿ ಹೊತ್ತಿಕೊಳ್ಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ. ವಿಡಿಯೋದಲ್ಲಿ ಹೊಗೆ ತುಂಬಿದ ಕ್ಯಾಬಿನ್‌ನೊಳಗೆ ಪ್ರಯಾಣಿಕರು ಅಳುತ್ತಿರುವುದು ಹಾಗೂ ಕೆಮ್ಮುತ್ತಲೇ ವಿಮಾನದಿಂದ ಹೊರಗೆ ಓಡಿಕೊಂಡು ಬರುತ್ತಿರುವುದನ್ನು ಗಮನಿಸಬಹುದಾಗಿದೆ.

ಕೋಸ್ಟ್ ಗಾರ್ಡ್ ವಿಮಾನದಲ್ಲಿ ಆರು ಸಿಬ್ಬಂದಿ ಇದ್ದರು. ಅವಘಡದಿಂದಾಗಿ ಐವರು ಸಿಬ್ಬಂದಿ ಮೃತಪಟ್ಟಿದ್ದಾರೆ. ವಿಮಾನದ ಕ್ಯಾಪ್ಟನ್ ಸ್ಥಿತಿ ಗಂಭೀರವಾಗಿದೆ ಎಂದು ಟೋಕಿಯೊದ ಪೊಲೀಸ್ ಇಲಾಖೆಯು ಜಪಾನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (NHK) ಗೆ ತಿಳಿಸಿದೆ. ಇನ್ನು ಈ ಸಂಬಂಧ ಸಾರಿಗೆ ಮತ್ತು ಪ್ರವಾಸೋದ್ಯಮ ಸಚಿವಾಲಯವು ಘಟನೆಯ ಕುರಿತು ತನಿಖೆ ನಡೆಸುತ್ತಿದೆ ಎಂದು ಎನ್‌ಎಚ್‌ಕೆ ವರದಿ ಮಾಡಿದೆ.

ದುರಂತದ ಬಗ್ಗೆ ಆದ ಅನುಭವ ಹಂಚಿಕೊಂಡ ಪ್ರಯಾಣಿಕ: ದುರಂತದ ಬಗ್ಗೆ ಪ್ರಯಾಣಿಕರೊಬ್ಬರು ಒಂದು ಕ್ಷಣ ತಮಗೆ ಆದ ಅನುಭವವನ್ನು ಹಂಚಿಕೊಂಡಿದ್ದು, ತಮ್ಮ ಎಕ್ಸ್‌ ಖಾತೆಯಲ್ಲಿ 2 ವಿಡಿಯೋಗಳನ್ನು ಶೇರ್‌ ಮಾಡಿಕೊಂಡು, ಒಂದು ಕ್ಷಣ ನಾನು ಸತ್ತೇ ಹೋದೆ ಅಂದುಕೊಂಡೆ ಎಂದು ಬರೆದುಕೊಂಡಿದ್ದಾರೆ.

ಪ್ರಯಾಣಿಕ ಶೇರ್‌ ಮಾಡಿಕೊಂಡಿರುವ 11 ಸೆಕೆಂಡಿನ ವಿಡಿಯೋದಲ್ಲಿ ವಿಮಾನದ ಹೊರಗಡೆಯಿಂದ ಬೆಂಕಿಹೊತ್ತಿಕೊಳ್ಳುತ್ತಿರುವುದನ್ನು ಕಿಟಕಿಯಿಂದ ಸೆರೆಹಿಡಿಯಲಾಗಿದೆ. ಇನ್ನೊಂದು 3 ಸೆಕೆಂಡಿನ ವಿಡಿಯೋದಲ್ಲಿ ಕ್ಯಾಬಿನ್‌ ಫುಲ್‌ ಹೊಗೆ ತುಂಬಿಕೊಂಡಿದೆ. ಅಲ್ಲದೆ ಪ್ರಯಾಣಿಕನೊಬ್ಬ ಬಟ್ಟೆಯಿಂದ ತಮ್ಮ ಮೂಗು ಹಾಗೂ ಬಾಯಿ ಮುಚ್ಚಿಕೊಳ್ಳುವುದನ್ನು ಕಾಣಬಹುದಾಗಿದೆ. ಉಳಿದ ಪ್ರಯಾಣಿಕರು ಕಾಪಾಡುವಂತೆ ಕೂಗಿಕೊಳ್ಳುವುದನ್ನು ಕೂಡ ವೀಡಿಯೋದಲ್ಲಿ ಗಮನಿಸಬಹುದಾಗಿದೆ.

ವಿಮಾನದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಅದರಲ್ಲಿದ್ದ 379 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ