NEWSನಮ್ಮಜಿಲ್ಲೆಮೈಸೂರು

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳ ಮೈಗೂಡಿಸಿಕೊಳ್ಳಿ : ಸಚಿವ ಕೆ.ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಪಶುಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪಟ್ಟಣದ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ 2023 -24 ನೇ ಸಾಲಿನ ಬಿಜಿಎಸ್ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳ ಭವಿಷ್ಯ ಕಟ್ಟುವಲ್ಲಿ ಶಿಕ್ಷಣವು ಅತ್ಯಂತ ಮಹತ್ವವಾಗಿದ್ದು, ಶಿಕ್ಷಕರು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರವು ಬಹಳ ಮುಖ್ಯವಾಗಿರುತ್ತದೆ ಆದ್ದರಿಂದ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸಬೇಕು ಶಿಕ್ಷಣದಿಂದ ಎಲ್ಲವನ್ನು ಪಡೆಯಲು ಸಾಧ್ಯವಾಗುತ್ತದೆ ವಿದ್ಯೆಗೆ ಬೆಲೆ ಸಿಗಬೇಕಾದರೆ ಮಾನವೀಯತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಮಾತನಾಡಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ವಿದ್ಯಾಸಂಸ್ಥೆಗಳ ಸ್ಥಾಪನೆಯಿಂದ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲು ಸಾಧ್ಯವಾಗುತ್ತದೆ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿದ್ಯೆಯನ್ನು ನೀಡುವತ್ತಾ ಹೆಚ್ಚು ಗಮನಹರಿಸಬೇಕು.

ಗ್ರಾಮಾಂತರ ಪ್ರದೇಶಗಳಿಂದ ಬರುವ ಮಕ್ಕಳು ಹೆಚ್ಚು ಬುದ್ಧಿವಂತರಾಗಿದ್ದು ಹೆಚ್ಚು ಹೆಚ್ಚು ವಿದ್ಯಾಭ್ಯಾಸ ಮಾಡಲು ಆಸಕ್ತಿ ವಹಿಸುತ್ತಿದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳ ದೂರ ದೃಷ್ಟಿಯ ಫಲವಾಗಿ ಇಂದು ಈ ಸಂಸ್ಥೆಯಲ್ಲಿ 1200 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಸಂತಸವಾಗಿದೆ ಎಂದರು.

ಮೈಸೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಬಿ.ಎನ್.ನಂದಿನಿ ಮಾತನಾಡಿ ವಿದ್ಯೆಯ ಜೊತೆಗೆ ವಿನಯವನ್ನು ಕಲಿಸುವ ಅಗತ್ಯವಿದ್ದು ಪ್ರತಿಯೊಬ್ಬರಿಗೂ ಸಾಮಾಜಿಕ ಜವಾಬ್ದಾರಿಯ ಅರಿವಿರಬೇಕು. ಪೋಷಕರು ತಾವು ಮನೆಯಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ಹವ್ಯಾಸಗಳನ್ನು ಮೈಗೂಡಿಸಿಕೊಂಡರೆ ಮಕ್ಕಳು ಸಹ ದುಶ್ಚಟಗಳಿಗೆ ಬಲಿಯಾಗುತ್ತಾರೆ. ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳಿಂದ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿವೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್, ಪಾರು ಧಾರಾವಾಹಿಯ ನಟಿ ಮೋಕ್ಷಿತ್ ಪೈ, ಪುರಸಭಾ ಸದಸ್ಯ ಶ್ಯಾಮ್, ವಾಣಿಜ್ಯೋದ್ಯಮಿ ಜೆ.ಎಸ್. ಶ್ರೀನಿವಾಸ್ ಸೇರಿದಂತೆ ಸಂಸ್ಥೆಯ ಅಧ್ಯಾಪಕ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ