CrimeNEWSಸಂಸ್ಕೃತಿ

ಕೆಂಡ ಸೇವೆ ವೇಳೆ ಅಯ್ಯಪ್ಪ ಮಾಲಾಧಾರಿ ಒಬ್ಬರು ಕೊಂಡಕ್ಕೆ ಬಿದ್ದು ಗಾಯ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ಕೆಂಡ ಸೇವೆ ವೇಳೆ ಅಯ್ಯಪ್ಪ ಮಾಲಾಧಾರಿಯೊಬ್ಬರು ಕೊಂಡದಲ್ಲಿ ಬಿದ್ದು ಗಾಯಗೊಂಡಿರುವ ಘಟನೆ ತಾಲೂಕಿನ ಮಲ್ಪೆಯಲ್ಲಿ ನಡೆದಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಅದ್ದೂರಿ, ಸಂಭ್ರಮದಿಂದ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಂಡ ಸೇವೆಯು ವಿಜೃಂಭಣೆಯಿಂದ ನಡೆಯುತ್ತಿತ್ತು.

ಸಾಂಪ್ರದಾಯಿಕವಾಗಿ ಮಾಲಾಧಾರಿಗಳು ಕೆಂಡದ ಮೇಲೆ ಹೋಗಲು ಪ್ರಾರಂಭ ಮಾಡಿದ್ದರು. ಮೊದಲು ಒಬ್ಬ ಮಾಲಾಧಾರಿ ಚೆನ್ನಾಗಿಯೇ ಕೆಂಡ ಹಾಯ್ದಿದ್ದಾರೆ. ಬಳಿಕ ಮತ್ತೊಬ್ಬ ಮಾಲಾಧಾರಿ ಕೆಂಡದ ಮೇಲೆ ಓಡಿ ಹೋಗಲು ಬಂದಿದ್ದಾರೆ.

ಮಾಲಾಧಾರಿ ಓಡಿ ಬರುತ್ತಿದ್ದಂತೆ ಎಡವಿ ಕೆಂಡದ ಮೇಲೆ ಬಿದ್ದಿದ್ದಾರೆ. ಮಾಲಾಧಾರಿ ಆಯತಪ್ಪಿ ಕೆಂಡದ ಮೇಲೆ ಬೀಳುತ್ತಿದ್ದಂತೆ ಉಳಿದ ಮಾಲಾಧಾರಿಗಳೆಲ್ಲ ಓಡಿ ಬಂದು ಅವರನ್ನು ಮೇಲೆತ್ತಿದ್ದಾರೆ.

ಇನ್ನು ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ದೃಶ್ಯವನ್ನು ಕೆಂಡ ಹಾಯಲು ನೋಡಲು ಬಂದಿದ್ದ ಭಕ್ತರು ಸೆರೆ ಹಿಡಿದಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ