NEWSಉದ್ಯೋಗವಿಜ್ಞಾನ

ಜ.7 ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಸ್ಪರ್ಧೆಗೆ ನೋಂದಾಯಿಸಲು ಕೊನೆಯದಿನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ/ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. 22 ವರ್ಷದೊಳಗಿನ 1000ಕ್ಕೂ ಹೆಚ್ಚು ಯುವಜನತೆ 57ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿದೆ.

2024ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್‌ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) “ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24” ಸ್ಫರ್ಧೆಯನ್ನು ಪ್ರಾರಂಭಿಸಿದೆ. ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು.

ಕ್ರ.ಸಂ 1 ರಿಂದ 40ರ ವರೆಗಿನ ಕೌಶಲ್ಯಗಳಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-2002ರ ನಂತರ ಜನಿಸಿರಬೇಕು. ಕ್ರ.ಸಂ 41 ರಿಂದ 57ರ ಕೌಶಲ್ಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-1999ರ ನಂತರ ಜನಿಸಿರಬೇಕು. ವರ್ಲ್ಡ್ ಸ್ಕಿಲ್ಸ್ ಮತ್ತು ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಕುರಿತು ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಭೇಟಿ ನೀಡಬಹುದು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 07 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 18005999918 ಅನ್ನು ಸಂಪರ್ಕಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ