CrimeNEWSನಮ್ಮಜಿಲ್ಲೆ

KKRTC: ಎರಡೂ ಬಸ್‌ಗಳ ನಡುವೆ ಭೀಕರ ಡಿಕ್ಕಿ- ಇಬ್ಬರು ಮೃತ, ಚಾಲಕರು ಸೇರಿ 10 ಮಂದಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು, ಚಾಲಕರು ಸೇರಿಂದತೆ 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ಇಂದು ಸಂಜೆ ನಡೆದಿದೆ.

ಜಿಲ್ಲೆ ಬಸನವಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ (36), ಕಲಬುರಗಿ ಪಟ್ಟಣದ ನಿವಾಸಿ ರೋಹಿಣಿ ಪಂಚಾಳ (31) ಮೃತಪಟ್ಟಿದ್ದು, ಕೆಕೆಆರ್‌ಟಿಸಿಯ ಎರಡೂ ಬಸ್ ಚಾಲಕರು ಸೇರಿದಂತೆ ಹತ್ತಕ್ಕೂ‌ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಈ ಅವಘಡ ಸಂಭವಿಸಿದೆ ಎಂದು ಘಟನೆ ಕುರಿತ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಪಘಾತಕ್ಕೊಳಗಾದ ಬಸ್​ಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಅಪಘಾತ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...