CrimeNEWSನಮ್ಮಜಿಲ್ಲೆ

NWKRT: ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕನ ವಿರುದ್ಧ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಚಲಿಸುತ್ತಿದ್ದ ಬಸ್‌ನಲ್ಲಿ ಗೊತ್ತಿಲ್ಲದೆ ವಿದ್ಯಾರ್ಥಿನಿ ಬ್ಯಾಗ್‌ ಕಂಡಕ್ಟರ್ ಕೈಗೆ ತಾಕಿದ್ದರಿಂದ ಕೋಪಗೊಂಡ ನಿರ್ವಾಹಕ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಘಟನೆ ನಗರದಲ್ಲಿ ನಡೆದಿದ್ದು, ಆಕ್ರೋಶಗೊಂಡ ಪಾಲಕರು ಮತ್ತು ಇತರರು ಪ್ರತಿಭಟನೆ ನಡೆಸಿದ್ದಾರೆ.

ಧಾರವಾಡದ ಕೆಲಗೇರಿ ಬಡಾವಣೆ ಬಳಿ ಈ ಘಟನೆ ನಡೆದಿದ್ದು, ಸಾಧನಕೆರೆಯಲ್ಲಿ ಶಾಲೆಯಿಂದ ಮರಳಿ ಮನೆಗೆ ವಾಪಸ್ ಬರುವಾಗ ನಿರ್ವಾಹಕ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಹೇಳಲಾಗಿದೆ.

ಪ್ರಯಾಣಿಕರು ಹೇಳಿದಂತೆ, ಧಾರವಾಡದಿಂದ ಮುಗದ ಗ್ರಾಮಕ್ಕೆ ಬಸ್ ತೆರಳುತಿತ್ತು. ರಶ್ ಇದ್ದ ಬಸ್‌ನಲ್ಲಿ ಕಂಡಕ್ಟರ್ ಹಣವನ್ನು ಎಣಿಸಲು ಮುಂದಾಗಿದ್ದರು. ಈ ವೇಳೆ ಅಚಾನಕ್ ಆಗಿ ಕೆಲಗೇರಿ ನಿವಾಸಿ ಪ್ರಕೃತಿ ಎಂಬ ವಿದ್ಯಾರ್ಥಿನಿಯ ಬ್ಯಾಗ್ ಕಂಡಕ್ಟರ್‌ಗೆ ಟಚ್ ಆಗಿದೆ. ಆಗ ಕಂಡಕ್ಟರ್ ಕೈಯಲ್ಲಿದ್ದ ಹಣವು ಕೆಳಗೆ ಬಿದ್ದಿದ್ದು, ಇದರಿಂದ ಕೋಪಗೊಂಡ ಕಂಡಕ್ಟರ್ ಸಿಟ್ಟಿನಲ್ಲಿ ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದಿದ್ದಾರೆ.

ಕಂಡಕ್ಟರ್ ಹೊಡೆದಿದ್ದರಿಂದ ವಿದ್ಯಾರ್ಥಿನಿಯ ಕೆನ್ನೆ ಮೇಲೆ ಬರೆ ಬಿದ್ದಿದ್ದು, ನೋವಿನಿಂದ ಆಕೆ ಬಿಕ್ಕಿ ಬಿಕ್ಕಿ ಅಳುತ್ತಲೇ ಬಸ್ ಇಳಿದು ಮನೆಗೆ ಹೋಗಿದ್ದಾಳೆ. ಬಳಿಕ ವಿಚಾರ ತಿಳಿದ ಪಾಲಕರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ದಿಢೀರ್ ಪ್ರತಿಭಟನೆ ನಡೆಸಿದರು.

ಅಲ್ಲದೆ ಕಂಡಕ್ಟರ್ ಇಲ್ಲಿಗೆ ಬಂದು ಕ್ಷಮೆ ಕೇಳುವಂತೆ ಪಟ್ಟು ಹಿಡಿದರು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರಾಮಸ್ಥರ ಮನವೊಲಿಸಲು ಮುಂದಾದರು. ಕೊನೆಗೆ ಪ್ರತಿಭಟನಾ ಸ್ಥಳಕ್ಕೆ ಬಂದ ಕಂಡಕ್ಟರ್ ಪಾಲಕರ ಬಳಿ ಕ್ಷಮೆ ಕೇಳಿದರು. ಇದರಿಂದ ಪ್ರಕರಣವು ಸುಖಾಂತ್ಯ ಕಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ