NEWSನಮ್ಮಜಿಲ್ಲೆಸಂಸ್ಕೃತಿ

ಅದ್ದೂರಿಯಾಗಿ ನಡೆದ ಖಿದ್ಮಾ ಫೌಂಡೇಶನಿಂದ ಆಯೋಜನೆಗೊಂಡ ಖಿದ್ಮಾ ಕಾವ್ಯಾಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ಜಯನಗರದ ವಿಜಯ ಕಾಲೇಜು ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ ಭಾನುವಾರ ವಿಜಯ ಕಾಲೇಜಿನ ಹಸಿರು ಭವನದಲ್ಲಿ ಅದ್ದೂರಿಯಾಗಿ ನಡೆಯಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಕವಿಗಳು ಸ್ವರಚಿತ ಕವನವನ್ನು ವಾಚನ ಮಾಡಿದರು. ಕರ್ನಾಟಕ ಸುವರ್ಣ ಮಹೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತರಷ್ಟು ಸಾಧಕರಿಗೆ ಖಿದ್ಮಾ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ವಿಜಯ ಕಾಲೇಜು ಪ್ರಾಂಶುಪಾಲರಾದ ಪ್ರೊ.ಡಿ.ಆರ್.ಸುಧಾ ಕಾರ್ಯಕ್ರಮ ಉದ್ಘಾಟಿಸಿದರು. ಯೂಸಫ್ ಎಚ್.ಬಿ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಶ್ವಿನಿ ಎಸ್. ಅಂಗಡಿ ಕವಿಗೋಷ್ಠಿಯ ಅಧ್ಯಕ್ಷತೆ ಮತ್ತು ಡಾ.ಬಿ.ಎನ್. ಸುರೇಶ್ ಬಾಬು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮದಲ್ಲಿ ವಿಜಯ ಕಾಲೇಜು ಉಪ ಪ್ರಾಂಶುಪಾಲ ಪ್ರೊ.ಎಲ್.ಕೆ. ಶ್ರೀವತ್ಸ, ಖಿದ್ಮಾ ಅಧ್ಯಕ್ಷ ಹಾಶಿಂ ಬನ್ನೂರು, ಕಮಲಾಕ್ಷಿ ಸುರೇಶ್ ಕೌಜಲಗಿ, ಹುಮಾಯೂನ್, ಡಾ. ಆರ್.ಎಸ್. ರವೀಂದ್ರ, ಕೆ.ಶ್ರೀಧರ್ (ಕೆ.ಸಿರಿ), ಡಾ.ಎಂ.ಎಂ.ಪೀರಜಾದೆ, ಉಮೇಶ್ ಸಿ. ಎನ್, ಡಾ.ಗಣೇಶ್ ಗಂಗೊಳ್ಳಿ, ವಿನಯ್ ಖಾನ್, ಡಾ ಜುಬೇದಾ ಎಂ ಬದಾಮಿ, ಡಾ. ಜ್ಯೋತಿ ಶ್ರೀನಿವಾಸ್, ಶ್ರೀ ಸಿನಾನ್ ಇದ್ದಬೆಟ್ಟು, ರಾಧಾಮಣಿ ಎಂ. ಕೋಲಾರ, ಉದಯ್ ಕಿರಣ್ ಬಿ, ಕಿರಣ್ ಕೆ. ಸಂತೋಷ್ ಕುಮಾರ್, ಪೂಜಾ ಸಿ.ಐ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಸ್ವಾಗತಿಸಿ, ರಶ್ಮಿತಾ ಸುರೇಶ್ ಜೋಗಿಬೆಟ್ಟು ನಿರೂಪಿಸಿದರು. ಕಾರ್ಯಕ್ರಮದ ಆಯೋಜಕ ಹಾಗೂ ರಾಜ್ಯ ಸಂಚಾಲಕ ಆಮಿರ್ ಬನ್ನೂರು ವಂದಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ