NEWSಶಿಕ್ಷಣ-

ಮಾರ್ಚ್ 1 ರಿಂದ 22 ವರೆಗೆ ದ್ವಿತೀಯ ಪಿಯುಸಿ – ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ SSLC ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22 ವರೆಗೆ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆ ನಡೆಯಲಿದೆ.

ಪ್ರತಿ ವರ್ಷದಂತೆಯೇ ಈ ವರ್ಷವೂ ಕೂಡ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೊದಲು ಪ್ರಾರಂಭವಾಗಿ ಮುಗಿಯಲಿವೆ. ಆ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಶುರುವಾಗಲಿವೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ನೋಡುವುದಾದರೆ…

* ಮಾ. 1- ಕನ್ನಡ, ಅರೇಬಿಕ್* ಮಾ. 4- ಗಣಿತ, ಶಿಕ್ಷಣ ಶಾಸ್ತ್ರ *ಮಾ. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ * ಮಾ. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್ * ಮಾ.7- ಇತಿಹಾಸ, ಭೌತಶಾಸ್ತ್ರ * ಮಾ.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ * ಮಾ. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ * ಮಾ.13- ಇಂಗ್ಲಿಷ್.

* ಮಾ.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ * ಮಾ. 16- ಅರ್ಥಶಾಸ್ತ್ರ * ಮಾ. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ * ಮಾ. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ * ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್  * ಮಾ.22- ಹಿಂದಿ ವಿಷಯದ ಪರೀಕ್ಷೆಗಳು ನಡೆಯಲಿವೆ.

ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿ ಗಮನಿಸುವುದಾದರೆ…: : * ಮಾರ್ಚ್ 25- ಪ್ರಥಮ ಭಾಷೆ * ಮಾರ್ಚ್ 27- ಸಮಾಜ ವಿಜ್ಞಾನ* ಮಾರ್ಚ್ 30 – ವಿಜ್ಞಾನ * ಏಪ್ರಿಲ್ 2 – ಗಣಿತ * ಏಪ್ರಿಲ್ 4- ತೃತೀಯ ಭಾಷೆ * ಏಪ್ರಿಲ್ 6 ದ್ವೀತಿಯ ಭಾಷೆ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ