CrimeNEWSದೇಶ-ವಿದೇಶ

ಪ್ರೇಯಸಿಯ ಕತ್ತು ಹಿಸುಕಿ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಪ್ರಿಯಕರ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಪ್ರೀತಿಯನ್ನು ನಾವು ಕೊನೆಗೊಳಿಸಿಕೊಳ್ಳೋಣ ಎಂದ ಪ್ರೇಯಸಿಯನ್ನು ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಕತ್ತುಹಿಸುಕಿ ಹತ್ಯೆಮಾಡಿದ ಬಳಿ ತಾನೂ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ನಗರದ ತಲೋಜಾ ಜೈಲು ಆವರಣದಲ್ಲಿ 19 ವರ್ಷದ ಯುವತಿಯ ಮೃತದೇಹ ಪತ್ತೆಯಾಗಿದ್ದು, ಇದು ಆ ಪ್ರದೇಶದ ಜನರಲ್ಲಿ ಆ ವೇಳೆ ಆತಂಕ ಉಂಟುಮಾಡಿತ್ತು. ಘಟನೆಯ ಬಗ್ಗೆ ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಇತ್ತ ಮುಂಬೈನ ಕಲಾಂಬೋಲಿ ಪ್ರದೇಶದ ನಿವಾಸಿಯಾಗಿದ್ದ 19 ವರ್ಷದ ಯುವತಿ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಳು ರಾತ್ರಿಯಾದರೂ ಆಕೆ ಮನೆಗೆ ವಾಪಸ್ಸಾಗಿಲ್ಲ ಎಂದು ಯುವತಿಯ ಮನೆಯವರು ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದರು.

ಅಂದೇ ರೈಲ್ವೇ ಪೊಲೀಸರ ಮೂಲಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದರ ಮಾಹಿತಿ ಸಿಕ್ಕಿತ್ತು. ಪೊಲೀಸರು ಸ್ಥಳಕ್ಕಾಗಮಿಸಿದಾಗ ಮೃತದೇಹದ ಬಳಿ ಫೋನ್‌ನಲ್ಲಿ ಡೆತ್‌ ನೋಟ್ ಪತ್ತೆಯಾಗಿದೆ. ಅದರಲ್ಲಿ ತನ್ನ ಗೆಳತಿಯನ್ನು ಕೊಲೆ ಮಾಡಿರುವುದಾಗಿ ಆತ ಬರೆದುಕೊಂಡಿದ್ದು ಸಿಕ್ಕಿದೆ.

ಇನ್ನು ಪೊಲೀಸರು ಈ ಆತ್ಮಹತ್ಯೆ ಪತ್ರದಲ್ಲಿ ಸಿಕ್ಕ ಸುಳಿವು ಆಧರಿಸಿ ಯುವತಿಯ ಶವಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಆ ವೇಳೆ ಪೊಲೀಸರು ಡ್ರೋನ್ ಸಹಾಯದಿಂದ ಯುವತಿಯ ಶವ ಹುಡುಕುತ್ತಿದ್ದಾಗ ಖಾರ್ಘರ್ ಅರಣ್ಯದಲ್ಲಿ ಯುವತಿ ಮೃತದೇಹ ಪತ್ತೆಯಾಗಿದೆ ಎಂದು ನವಿ ಮುಂಬೈ ಉಪ ಪೊಲೀಸ್‌ ಆಯುಕ್ತ ಅಮಿತ್ ಕಾಳೆ ತಿಳಿಸಿದ್ದಾರೆ.

ಇಬ್ಬರ ನಡುವಿನ ಜಗಳವೇ ಕಾರಣ: ವೈಷ್ಣವಿ ಮನೋಹರ್ ಬಾಬರ್ (19) ಮತ್ತು ವೈಭವ್ ಬುರುಗಲ್ಲೆ (24) ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕೆಲ ದಿನಗಳಿಂದ ವೈಷ್ಣವಿಯು ಪ್ರಿಯಕರನಿಂದ ದೂರವಾಗಲು ಪ್ರಯತ್ನಿಸುವ ಮೂಲಕ ಪ್ರೀತಿ ಕೊನೆಗೊಳಿಸಲು ಬಯಸಿದ್ದಳು. ಈ ಕುರಿತು ಅವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ಪೊಲೀಸರಿಗೆ ಈಗ ಸಿಕ್ಕಿದೆ.

ಅಂತೆಯೇ ಜಗಳ ವಿಕೋಪಕ್ಕೆ ಹೋಗಿದ್ದು, ಪ್ರಿಯಕರನೇ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆ ಬಳಿಕ ಕೋಪದಿಂದ ಆತನೂ ಪತ್ರ ಬರೆದು ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ಅಲ್ಲದೇ ಗೆಳತಿಯ ಕೊಲೆಯಿಂದ ನೋವಾಗಿ ಈ ರೀತಿ ಮಾಡಿಕೊಂಡಿದ್ದೇನೆ ಎಂದು ಯುವಕ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾನೆ.

ಕೋಪದಿಂದ ಪ್ರೇಯಸಿಯನ್ನು ಕೊಂದು ಅದರ ನೋವಿನಿಂದ ಆಚೆಬರಲಾಗದೆ ಪ್ರಿಯಕರನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ