NEWSಬೆಂಗಳೂರುಸಂಸ್ಕೃತಿ

215ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್​​ಬಾಗ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರತಿವರ್ಷದಂತೆ ಗಣರಾಜ್ಯೋತ್ಸವದ ನಿಮಿತ್ತ ಲಾಲ್​​ಬಾಗ್​ನಲ್ಲಿ ಆಯೋಜಿಸಲಾಗಿರುವ 215ನೇ ಫಲಪುಷ್ಪ ಪ್ರದರ್ಶನದಲ್ಲಿ ಅರಳಿರುವ ಬಸವಣ್ಣನ ಪ್ರತಿರೂಪಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.

ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಗುರುವಾರ (ಜ.18) ಆಯೋಜಿಸಿದ್ದ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ 2024 ಅನ್ನು ಉದ್ಘಾಟಿಸಿ ಬಳಿಕ ವೀಕ್ಷಿಸಿದರು.

ಈ ಬಾರಿ ಫಲಪುಷ್ಟ ಪ್ರದರ್ಶನದಲ್ಲಿ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚನ್ನಬಸವಣ್ಣ ಪ್ರತಿರೂಪ ಅರಳಿವೆ. ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಸೇವಂತಿಗೆ, ಗುಲಾಬಿ ಹೂವುಗಳಿಂದ ಅನುಭವ ಮಂಟಪ ನಿರ್ಮಾಣವನ್ನೂ ಮಾಡಲಾಗಿದೆ. 8 ಬಗೆಯ 32 ಲಕ್ಷ ಹೂವುಗಳನ್ನು ಬಳಕೆ ಮಾಡಲಾಗಿದ್ದು, ಜನವರಿ 28ರವರೆಗೂ ಪ್ರತಿದಿನ ಬೆಳಗ್ಗೆ 6.30ರಿಂದ ಸಂಜೆ 7.30ರವರೆಗೆ ಫಲಪುಷ್ಪ ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

ಫಲಪುಷ್ಟ ಪ್ರದರ್ಶನ ಉದ್ಘಾಟನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಲವಾರು ಸ್ವಾಮೀಜಿಗಳು ನನ್ನನ್ನು ಭೇಟಿ‌ ಮಾಡಿದ ವೇಳೆ ಸಾಂಸ್ಕೃತಿಕ ನಾಯಕ ಅಂತ ಬಸವಣ್ಣನವರನ್ನು ಕರೆಯಬೇಕು ಎಂದು ಒತ್ತಾಯ ಮಾಡಿದರು. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ಮುಂದೆ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಕರೆಯಲಾಗುತ್ತದೆ ಎಂದು ಘೋಷಣೆ ಮಾಡಿದರು.

ಇನ್ನು ಶಿಕಾರಿಪುರದಲ್ಲಿರುವ 46 ಎಕರೆ ಜೈಲಿನ ಜಾಗಕ್ಕೆ ಅಲ್ಲಮಪ್ರಭು ಎಂದು ನಾಮಕರಣ ಮಾಡಿದ್ದೇವೆ ಎಂದ ಅವರು, ಲಾಲ್​ಬಾಗ್​ನಲ್ಲಿ ಎಂದಿನಂತೆ ಗಣರಾಜ್ಯೋತ್ಸವದ ಪ್ರಯುಕ್ತ ಫಲಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. 12ನೇ ಶತಮಾನದಲ್ಲಿ ಸಮಾನತೆಯನ್ನು ನಿರ್ಮಿಸಿ ಜಾತಿ ಪದ್ಧತಿ ಹೋಗಲಾಡಿಸುವ ನಿಟ್ಟಿನಲ್ಲಿ ಬಸವಣ್ಣನವರು ಹೋರಾಡಿದ್ದರು ಎಂದು ತಿಳಿಸಿದರು.

ಇಂದು ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚನ್ನಬಸವಣ್ಣ ಪ್ರತಿರೂಪ ಅರಳಿಸಿ ಬಸವಣ್ಣನವರ ಸಂದೇಶವನ್ನು ಜನರಿಗೆ ತಲುಪಿಸುವ ಕೆಲಸವನ್ನು ತೋಟಗಾರಿಕೆ ಇಲಾಖೆ ಮಾಡಿದೆ. ಬೆಂಗಳೂರು ಜನರು ಇದರ ಸದುಪಯೋಗ ಪಡೆದುಕೊಳ್ಳಿ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಬೆಳವಣಿಗೆಯ ಪರಿಚಯಿಸುವ ಕೆಲಸ ತೋಟಗಾರಿಕೆ ಇಲಾಖೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು