NEWSನಮ್ಮಜಿಲ್ಲೆನಮ್ಮರಾಜ್ಯ

ಗೃಹಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಶೇ.10 ಯೂನಿಟ್‌ ಬದಲು ಹೆಚ್ಚುವರಿ 10 ಅರ್ಹತಾ ಯೂನಿಟ್‌ ಫ್ರೀ..!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಿದ್ದು, 48 ಯೂನಿಟ್‌ಗಿಂತ ಕಡಿಮೆ ಬಳಸುತ್ತಿರುವವರಿಗೆ ಸಿಹಿ ಸುದ್ದಿ ನೀಡಿದೆ.

ಅದೇನಂಪ್ಪ ಅಂದರೆ ಈವರೆಗೂ ಶೇ.10ರಷ್ಟು ಮಾತ್ರ ಸಾಮೂಹಿಕವಾಗಿ ಎಲ್ಲರಿಗೂ ಕೊಡಲಾಗುತ್ತಿತ್ತು. ಆದರೆ, ಇಂದು ಸಚಿವ ಸಂಪುಟ ಸಭೆಯಲ್ಲಿ ಈ ಶೇ.10 ಬದಲು 48ಯೂನಿಟ್‌ ಒಳಗೆ ಬಳಸುತ್ತಿರುವವರಿಗೆ 10 ಯೂನಿಟ್‌ ಫ್ರೀ ವಿದ್ಯುತ್ ನೀಡಲು ಸರ್ಕಾರ ತೀರ್ಮಾನಿಸಲಾಗಿದೆ.

ಈ ಕುರಿತು ಮಾತನಾಡಿದ ಸಚಿವ ಎಚ್​.ಕೆ. ಪಾಟೀಲ್, ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯೂನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯೂನಿಟ್ ಅರ್ಹತಾ ಯೂನಿಟ್‌ಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ. ವಿದ್ಯುತ್ ಸರಬರಾಜು ಕಂಪನಿಗಳು ಯುಪಿಸಿಎಲ್​​ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತ ಕುರಿತು ಚರ್ಚೆಯಾಗಿದೆ ಎಂದು ತಿಳಿಸಿದರು.

ಇನ್ನು ಸೆಂಟ್ರಲ್ ಇಆರ್​ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿವೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ. ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ ಇದೀಗ 4450 ಕೋಟಿ ರೂ. ಸಾಲಕ್ಕೆ ಖಾತರಿ ನೀಡಲು ತೀರ್ಮಾನಿಸಿದೆ ಎಂದು ಸಚಿವ ಎಚ್​.ಕೆ. ಪಾಟೀಲ್​ ವಿವರಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ