ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ರಾಜ್ಯ ಸೇರಿದಂತೆ ಇತರ ನೆರೆಯ ರಾಜ್ಯಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 5.39 ಲಕ್ಷ ರೂಪಾಯಿ ದಂಡ ನಿಗಮದ ತನಿಖಾಧಿಕಾರಿಗಳು ವಸೂಲಿ ಮಾಡಿದ್ದಾರೆ.
ಡಿಸೆಂಬರ್ನಲ್ಲಿ 43,863 ಬಸ್ಗಳನ್ನು ತಪಾಸಣೆ ನಡೆಸಿದ ತನಿಖಾ ಸಿಬ್ಬಂದಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 3,340 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ ಎಂದು ಗುರುವಾರ ಕೆಎಸ್ಆರ್ಟಿಸಿ ಅಧಿಕಾರಿಗಳು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದವರಿಂದ ನಿಗಮಕ್ಕೆ ಒಟ್ಟು ರೂ. 77, 577 ನಷ್ಟವಾಗಿತ್ತು. ಅಲ್ಲದೆ ಈ ಸಂಬಂಧ ತಪ್ಪಿತಸ್ಥ ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುತ್ತಿದೆ.
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವಾಗ ಟಿಕೆಟ್/ ಪಾಸ್ಗಳನ್ನು ಪಡೆದುಕೊಂಡು ಸುರಕ್ಷಿತವಾಗಿ ಪ್ರಯಾಣಿಸಿ ಟಿಕೆಟ್ ರಹಿತ ಪ್ರಯಾಣದಿಂದ ದಂಡ ಕಟ್ಟಬೇಡಿ ಎಂದು ನಿಗಮ ಅಧಿಕಾರಿಗಳು ಪ್ರಯಾಣಿಕರಿಗೆ ಸಲಹೆ ನೀಡಿದ್ದಾರೆ.