ಮೈಸೂರು: ನಂಜನಗೂಡಿನ ಕಪಿಲಾ ನದಿಯ ಹೆಜ್ಜಿಗೆ ಸೇತುವೆ ಬಳಿ ಶುಕ್ರವಾರ ಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರು ಅಯ್ಯಪ್ಪ ಮಾಲಾ ಧಾರಿಗಳ ಪೈಕಿ ಮೂವರು ನೀರು ಪಾಲಾಗಿ ಇಬ್ಬರು ಬದುಕುಳಿದಿರುವ ಘಟನೆ ನಡೆದಿದೆ.
ತುಮಕೂರು ಮೂಲದ ಗವಿ ರಂಗ (19), ರಾಕೇಶ್(19) ಹಾಗೂ ಅಪ್ಪು(16) ಎಂಬುವರೆ ನದಿಪಾಲಾದವರು. ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಐವರು ಗುರುವಾರ ತಡರಾತ್ರಿ ಇಲ್ಲಿನ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದರು. ಶುಕ್ರವಾರ ಬೆಳಗ್ಗೆ ಸ್ನಾನಕ್ಕೆಂದು ನದಿಗೆ ಇಳಿದಿದ್ದಾರೆ.
ಈ ವೇಳೆ ಐವರ ಪೈಕಿ ಮೂವರು ನೀರುಪಾಲಾಗಿದ್ದು, ಇಬ್ಬರುಸೇಫ್ ಆಗಿದ್ದಾರೆ. ನದಿಯಲ್ಲಿ ಅಯ್ಯಪ್ಪ ಮಾಲೆ ತೆಗೆಯಲು ಹೋದಾಗ ಕಾಲು ಜಾರಿ ಮೂವರು ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆದು ಮೃತರ ಗ್ರಾಮಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.