CrimeNEWSನಮ್ಮಜಿಲ್ಲೆ

ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು ತಪ್ಪು: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಇವರೇನೆ ಮಾಡಿದರು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು ಎಂದು ತಿಳಿಸಿದ್ದಾರೆ.

ಇನ್ನು ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಘಟನೆ: ಮಂಡ್ಯ ತಾಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜತೆಗೆ ಗ್ರಾಮ ಪಂಚಾಯಿತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು.

ಅವರ ಮನವಿಯ ಮೇರೆಗೆ ಗ್ರಾಮ ಪಂಚಾಯಿತಿಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದೆ. ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ