NEWSದೇಶ-ವಿದೇಶಸಿನಿಪಥ

ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಿವುಡ್ ನಟಿ, ಪೂನಂ ಪಾಂಡೆ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಮತ್ತು ರೂಪದರ್ಶಿ ಪೂನಂ ಪಾಂಡೆ (Poonam Pandey) ಇಂದು ಬೆಳಗ್ಗೆ ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.

ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌ ಮಾಡಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬಹಳ ಆಘಾತ ಉಂಟಾಗಿದೆ. ಪೂನಂ ಪಾಂಡೆಗೆ ಗರ್ಭಕಂಠದ ಕ್ಯಾನ್ಸರ್ (Cervical Cancer) ಇರುವ ವಿಚಾರ ಇತ್ತೀಚೆಗಷ್ಟೇ ಗೊತ್ತಾಗಿತ್ತು.

ಆದರೆ, ಅಷ್ಟರಲ್ಲಾಗಲೇ ಬಹಳ ತಡವಾಗಿತ್ತು. ಆಕೆಗೆ ಗೊತ್ತಾಗುವ ವೇಳೆಗಾಗಲೇ ಕ್ಯಾನ್ಸರ್ (Cancer) ಕೊನೆಯ ಹಂತದಲ್ಲಿತ್ತು. ಹೀಗಾಗಿ, ಗರ್ಭಕಂಠದ ಕ್ಯಾನ್ಸರ್ ಅನ್ನು ಗುಣಪಡಿಸಲು ಸಾಧ್ಯವಾಗಲಿಲ್ಲ. ಪೂನಂ ಪಾಂಡೆ ಅವರು ಗರ್ಭಕಂಠ ಕ್ಯಾನ್ಸರ್‌ನಿಂದ ಅಗಲಿದರು ಎಂದು ಹೇಳಲು ಭಾರಿ ದುಃಖವಾಗುತ್ತಿದೆ.

ಜೀವನದಲ್ಲಿ ಅವರು ಯಾರನ್ನೇ ಭೇಟಿಯಾದರೂ, ಪ್ರೀತಿ ಹಾಗೂ ವಿನಯದಿಂದ ವರ್ತಿಸಿದ್ದರು. ಅವರ ಖಾಸಗಿ ಹಾಗೂ ವ್ಯಯಕ್ತಿಕ ಬದುಕಿನ ಬಗ್ಗೆ ಯಾರೂ ಮಾತನಾಡಬಾರದು ಎಂಬುದಾಗಿ ಮನವಿ ಮಾಡುತ್ತೇವೆ” ಎಂದು ಅವರ ಮ್ಯಾನೇಜರ್‌ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪೂನಮ್‌ ಪಾಂಡೆ ಅವರು ಉತ್ತರಪ್ರದೇಶದ ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಕುರಿತಾದ ಇತರ ಮಾಹಿತಿಗಳು ಇನ್ನಷ್ಟೇ ಬರಬೇಕಿದೆ. ತಮ್ಮ ವಿವಾದಿತ ಮಾತುಗಳಿಂದಲೇ ಪ್ರಖ್ಯಾತಿ ಪಡೆದಿದ್ದ ಪೂನಮ್‌ ಪಾಂಡೆ, ಸೋಶಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದ ಫಾಲೋವರ್‌ಗಳನ್ನು ಹೊಂದಿದ್ದರು.

ಬೋಲ್ಡ್‌ ಫೋಟೊಗಳು, ಬೋಲ್ಡ್‌ ನಟನೆ ಹಾಗೂ ವಿವಾದಾತ್ಮಕ ಹೇಳಿಕೆಗಳಿಂದ ಪ್ರಸಿದ್ಧರಾಗಿದ್ದ ಪೂನಂ ಪಾಂಡೆ ಅವರು ಬಿಹಾರದಲ್ಲಿ ಜನಿಸಿ, ಮುಂಬೈನಲ್ಲಿ ಬೆಳೆದವರು. ಮೊದಲು ಮಾಡೆಲಿಂಗ್‌ ಕ್ಷೇತ್ರ ಪ್ರವೇಶಿಸಿದರು. 2013ರಲ್ಲಿ ನಶಾ ಎಂಬ ಸಿನಿಮಾ ಮೂಲಕ ಬಾಲಿವುಡ್‌ ಪ್ರವೇಶಿಸಿದ ಪೂನಂ ಪಾಂಡೆ, ಭೋಜ್‌ಪುರಿಯ ಅದಾಲತ್‌, ತೆಲುಗಿನಲ್ಲಿ ಮಾಲಿನಿ & ಕೊ., ಹಿಂದಿಯ ಜಿಎಸ್‌ಟಿ-ಗಲ್ತಿ ಸಿರ್ಫ್‌ ತುಮ್ಹಾರಿ ಹಾಗೂ ದಿ ಜರ್ನಿ ಆಫ್‌ ಕರ್ಮ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.

ಕನ್ನಡ ಸಿನಿಮಾದಲ್ಲೂ ಪೂನಂ ಪಾಂಡೆ ಛಾಪು ಇದೆ. ಅವರು 2014ರಲ್ಲಿ ಬಿಡುಗಡೆಯಾದ ಲವ್‌ ಈಸ್‌ ಪಾಯ್ಸನ್‌ ಕನ್ನಡ ಸಿನಿಮಾದಲ್ಲಿ ಹಾಡೊಂದಿಗೆ ಹೆಜ್ಜೆ ಹಾಕಿದ್ದರು. 2011ರಲ್ಲಿ ಭಾರತ ಕ್ರಿಕೆಟ್‌ ತಂಡವು ವಿಶ್ವಕಪ್‌ ಗೆದ್ದರೆ ತಂಡ ಎದುರು ನಾನು ಸಂಪೂರ್ಣವಾಗಿ ಬೆತ್ತಲಾಗುವೆ ಎಂದು ಹೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದರು.

ಗರ್ಭಕಂಠದ ಕ್ಯಾನ್ಸರ್ ಎಂದರೇನು: ಗರ್ಭಕಂಠದ ಕ್ಯಾನ್ಸರ್ (cervical cancer) ಎಂಬುದು ಗರ್ಭಕಂಠದಲ್ಲಿ ಪ್ರಾರಂಭವಾಗುವ ಜೀವಕೋಶಗಳ ಬೆಳವಣಿಗೆಯಾಗಿದೆ. ಗರ್ಭಕಂಠವು ಗರ್ಭಾಶಯದ ಕೆಳಗಿನ ಭಾಗವಾಗಿದ್ದು ಅದು ಯೋನಿಯೊಂದಿಗೆ ಸಂಪರ್ಕಿಸುತ್ತದೆ. HPV ಎಂದು ಕರೆಯಲ್ಪಡುವ ಮಾನವ ಪ್ಯಾಪಿಲೋಮವೈರಸ್‌ನ ವಿವಿಧ ತಳಿಗಳು ಈ ಗರ್ಭಕಂಠದ ಕ್ಯಾನ್ಸರ್‌ ಉಂಟುಮಾಡುವಲ್ಲಿ ಮುಖ್ಯವಾದ ಪಾತ್ರ ವಹಿಸುತ್ತವೆ.

HPV ಲೈಂಗಿಕ ಸಂಪರ್ಕದ ಮೂಲಕ ಹಾದುಹೋಗುವ ಸಾಮಾನ್ಯ ಸೋಂಕು. HPVಗೆ ಒಡ್ಡಿಕೊಂಡಾಗ ನಮ್ಮ ದೇಹದ ರೋಗನಿರೋಧಕ ಶಕ್ತಿಯು ಸಾಮಾನ್ಯವಾಗಿ ಈ ವೈರಸ್ ದೇಹದ ಅಂಗಗಳಿಗೆ ಹಾನಿ ಮಾಡದಂತೆ ತಡೆಯುತ್ತದೆ. ಆದರೆ, ಕೆಲವು ಪ್ರಕರಣಗಳಲ್ಲಿ ಈ ವೈರಸ್ ಹಲವು ವರ್ಷಗಳವರೆಗೆ ಬದುಕುತ್ತದೆ. ಇದು ಗರ್ಭಕಂಠದ ಕೋಶಗಳನ್ನು ಕ್ಯಾನ್ಸರ್ ಕೋಶಗಳಾಗಿ ಪರಿವರ್ತಿಸುತ್ತದೆ.

ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮತ್ತು HPV ಸೋಂಕಿನಿಂದ ರಕ್ಷಿಸುವ ಲಸಿಕೆಯನ್ನು ಪಡೆಯುವ ಮೂಲಕ ನೀವು ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಗರ್ಭಕಂಠದ ಕ್ಯಾನ್ಸರ್ ಉಂಟಾದಾಗ ಕ್ಯಾನ್ಸರ್ ಅನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗಿಂತ ಮೊದಲು ಚಿಕಿತ್ಸೆ ನೀಡಲಾಗುತ್ತದೆ.

ಇತರ ಚಿಕಿತ್ಸೆಗಳು ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಔಷಧಗಳನ್ನು ನೀಡುತ್ತದೆ. ಈ ವೇಳೆ ಕೀಮೋಥೆರಪಿ ಕೂಡ ಮಾಡಲಾಗುತ್ತದೆ. ಗರ್ಭಕಂಠದ ಕ್ಯಾನ್ಸರ್ ಆರಂಭದಲ್ಲಿ ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಇದು ಬೆಳೆದಂತೆ ಗರ್ಭಕಂಠದ ಕ್ಯಾನ್ಸರ್ ಲಕ್ಷಣಗಳು ಹೆಚ್ಚಾಗುತ್ತಾ ಹೋಗುತ್ತದೆ.

ಗರ್ಭಕಂಠದ ಕ್ಯಾನ್ಸರ್​ನ ಲಕ್ಷಣಗಳೇನು?: * ಸಂಭೋಗದ ನಂತರ, ಪಿರಿಯಡ್ಸ್​ ಮುಗಿದ ನಂತರ ಅಥವಾ ಋತುಬಂಧದ ನಂತರ ಯೋನಿಯಲ್ಲಿ ರಕ್ತಸ್ರಾವ ಉಂಟಾಗುವುದು. * ಮುಟ್ಟಿನ ಸಮಯದಲ್ಲಿ ವಿಪರೀತ ರಕ್ತಸ್ರಾವ ಆಗುವುದು. ದೀರ್ಘಕಾಲದವರೆಗೆ ರಕ್ತಸ್ರಾವ ಇರುವುದು. * ನೀರಿನಂಶವಿರುವ, ರಕ್ತಸಿಕ್ತ ಯೋನಿ ಸ್ರವಿಸುವಿಕೆ. ಇದು ಕೊಳಕು ವಾಸನೆಯನ್ನು ಕೂಡ ಹೊಂದಿರುತ್ತದೆ. * ಶ್ರೋಣಿಯ ನೋವು ಅಥವಾ ಸಂಭೋಗದ ಸಮಯದಲ್ಲಿ ನೋವು.

ಹೆಚ್ಚಿನ ಗರ್ಭಕಂಠದ ಕ್ಯಾನ್ಸರ್​ಗಳು HPVಯಿಂದ ಉಂಟಾಗುತ್ತವೆ. HPV ಲೈಂಗಿಕ ಸಂಪರ್ಕದ ಮೂಲಕ ಹರಡುವ ಸಾಮಾನ್ಯ ವೈರಸ್. ಹೆಚ್ಚಿನ ಜನರಿಗೆ ಈ ವೈರಸ್ ಎಂದಿಗೂ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ. ಇದು ಸಾಮಾನ್ಯವಾಗಿ ತನ್ನಷ್ಟಕ್ಕೆ ತಾನೇ ದೇಹದಿಂದ ಹೊರಹೋಗುತ್ತದೆ. ಆದರೆ, ಕೆಲವರಿಗೆ, ಈ ವೈರಸ್ ಜೀವಕೋಶಗಳಲ್ಲಿ ಬದಲಾವಣೆಗಳನ್ನು ಉಂಟುಮಾಡಬಹುದು. ಅದು ಕ್ಯಾನ್ಸರ್​ಗೆ ಕಾರಣವಾಗಬಹುದು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು