ಬೆಂಗಳೂರು: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ಜರುಗಿದೆ.
ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಕುಸುಮಿತಾ (21) ಎಂಬ ಯುವತಿಯೇ ಇಂದು ಬೆಳಗ್ಗೆ 8.30ಕ್ಕೆ ಕಾಲೇಜಿಗೆ ತೆರಳುತ್ತಿದ್ದಾಗ ಅವಘಡದಲ್ಲಿ ಅಸುನೀಗಿದವರು.
ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್ ಬಳಿ ಬೈಕ್‌ನಲ್ಲಿ ಬರುತಿದ್ದ ಯುವತಿ, ಅಲ್ಲಿಂದ ಮೆಟ್ರೋ ಬಳಸಿ ಕಾಲೇಜಿಗೆ ತೆರಳುತಿದ್ದಳು. ಶುಕ್ರವಾರ ಬೆಳಗ್ಗೆ ಸಹ ಎಂದಿನಂತೆಯೇ, ಮಲ್ಲೇಶ್ವರದಿಂದ ಹೊರಟಿದ್ದಳು. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಬಸ್ ಆಕೆ ತೆರಳುತ್ತಿದ್ದ ಬೈಕ್ಗೆ ಡಿಕ್ಕಿಹೊಡೆದಿದೆ. ಬಳಿಕ ಬೈಕ್ ಸಮೇತ ಎಳೆದೊಯ್ದಿದೆ.
ಈ ಅಪಘಾತದಿಂದ ಗಾಯಾಗೊಂಡಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.