NEWSನಮ್ಮಜಿಲ್ಲೆರಾಜಕೀಯ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪರಿಷತ್‌ ಚುನಾವಣೆ -2024 ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ