NEWSನಮ್ಮಜಿಲ್ಲೆ

ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಅಪರ ಜಿಲ್ಲಾಧಿಕಾರಿ ಅಮರೇಶ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಪ್ರಕರಣಗಳನ್ನು ತಡೆದು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಚ್‌.ಅಮರೇಶ್ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ “ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಲಾಗಿದೆ. ಸಮಾಜದಲ್ಲಿ ಮಕ್ಕಳ ಮೇಲೆ ದೌರ್ಜನ್ಯ, ಶೋಷಣೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಹಕಾರದಿಂದ ಮಕ್ಕಳ ರಕ್ಷಣೆ ಸಾಧ್ಯ ಎಂದರು.

ಬಾಲ್ಯ ವಿವಾಹ ತಡೆಯಲು ಶಾಲಾ, ಕಾಲೇಜುಗಳಲ್ಲಿ, ಪಂಚಾಯಿತಿ ಮಟ್ಟದಲ್ಲಿ , ಸಾರ್ವಜನಿಕ ಸ್ಥಳಗಳಲ್ಲಿ ಅರಿವು ಮೂಡಿಸಬೇಕು. ಮಕ್ಕಳ ಭಿಕ್ಷಾಟನೆ, ಬಾಲಕಾರ್ಮಿಕ, ಶಿಕ್ಷಣ ವಂಚಿತ ಮಕ್ಕಳು, ಲೈಂಗಿಕ ದೌರ್ಜನ್ಯ, ಕಾಣೆಯಾದ ಮಕ್ಕಳು ಮುಂತಾದ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂಖ್ಯೆಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರಾಮು, ವಿಶ್ವನಾಥಪುರ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು