ಬೆಂಗಳೂರು ಗ್ರಾಮಾಂತರ : 2023-24ನೇ ಶೈಕಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ (ಪಿ.ಯು.ಸಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್) ಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದಲ್ಲಿರುವ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಆನ್ಲೈನ್ https://ssp.Karnataka.gov.in (ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15: ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ), ವಿದ್ಯಾರ್ಥಿಯು ಕರ್ನಾಟಕ ನಿವಾಸಿಯಾಗಿರಬೇಕು, ವಿದ್ಯಾರ್ಥಿಯು ಓದುತ್ತಿರುವ ಹಿಂದಿನ ವರ್ಷದಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.
ಮೆಟ್ರಿಕ್ ನಂತರದ (ಶುಲ್ಕ ಮರುಪಾವತಿ) ಗಾಗಿ ವಿದ್ಯಾರ್ಥಿಯ ಕುಂಟುಂಬದ ವಾರ್ಷಿಕ ಆದಾಯವು ರೂ.2.00ಲಕ್ಷ ಮೀರಿರಬಾರದು. 5.ಮೆರಿಟ್-ಕಮ್-ಮೀನ್ಸ್ (ಶುಲ್ಕ ಮರುಪಾವತಿ)ಗಾಗಿ ವಿದ್ಯಾರ್ಥಿಯ ಕುಂಟುಂಬದ ವಾರ್ಷಿಕ ಆದಾಯವು ರೂ.2.50ಲಕ್ಷ ಮೀರಿರಬಾರದು.
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://Dom.Karnataka.gov.in ಅನ್ನು ವೀಕ್ಷಿಸಿ, ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸುವುದು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-22866966, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27627444/ 9986874875, ನೆಲಮಂಗಲ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-27725445/9986951290.
ದೇವನಹಳ್ಳಿ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27682882/8861926851, ಹೊಸಕೋಟೆ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27931899/7676905779 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.