NEWSನಮ್ಮಜಿಲ್ಲೆಶಿಕ್ಷಣ-

ಹಾಸ್ಟೆಲ್‌ಗಳಲ್ಲಿ ಮನೆ ವಾತಾವರಣ ನಿರ್ಮಿಸಿ : ಜಿಲ್ಲಾಧಿಕಾರಿ ಡಾ. ಶಿವಶಂಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳನ್ನು ಮನೆಯವರಂತೆ ಭಾವಿಸಿ ಪೋಷಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಹಾಸ್ಟೆಲ್ ಸಿಬ್ಬಂದಿಗೆ ಸಲಹೆ ನೀಡಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಾರ್ಡನ್, ಅಡುಗೆಯವರು, ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಸತಿ ಶಾಲೆಯಲ್ಲಿನ ಯಾವುದೇ ಸಮಸ್ಯೆ ಕಂಡುಬಂದರೆ ಶೀಘ್ರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಕೊಠಡಿ, ಶೌಚಾಲಯಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು. ಆಹಾರದ ಗುಣಮಟ್ಟ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಊಟ ನೀಡಬೇಕು. ಮೂಲಭೂತ ಸೌಕರ್ಯಗಳು ಹೆಚ್ಚಿನ ಪ್ರಾಶಸ್ತ್ಯ ನೀಡಿ ಉತ್ತಮ ರೀತಿಯ ಮನೆಯ ವಾತಾವರಣ ನಿರ್ಮಿಸಿ, ಶಿಕ್ಷಣ ಕಲ್ಪಿಸಿ ಎಂದು ಹೇಳಿದರು.

ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಮಾತನಾಡಿ, ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನದಾಗಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಬದುಕುವುದನ್ನು ಕಲಿಸಿಕೊಡಬೇಕು. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.

ಇನ್ನು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳ ರಕ್ಷಣೆ ಮಾಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಈ ರೀತಿಯ ಕಾರ್ಯಾಗಾರಗಳು ಅತಿಮುಖ್ಯ ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ತರಬೇತಿಯಲ್ಲಿ ವಸತಿ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಸಂಪನ್ಮೂಲ ವ್ಯಕ್ತಿಯಿಂದ ತರಬೇತಿ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ‌‌.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಇ.ಕವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಾಸ್ಟೇಲ್ ವಾರ್ಡನ್ ಗಳು, ಹಾಸ್ಟೆಲ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್