NEWSನಮ್ಮಜಿಲ್ಲೆನಮ್ಮರಾಜ್ಯವಿಶೇಷ

ಇಂದಿನಿಂದ ವಿಧಾನಸಭೆ ಬಜೆಟ್ ಅಧಿವೇಶನ: ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನ ಇಂದಿನಿಂದ ಫೆ.23ರವರೆಗೆ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಭಾಷಣದಲ್ಲಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಹಾಡಿಹೊಗಳಿದ್ದಾರೆ.

ಇನ್ನು ಫೆ.16ರಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಹತ್ತು ದಿನಗಳು ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಬಲ ಅಸ್ತ್ರಗಳ ಮೂಲಕ ಆಡಳಿತಾರೂಢ ಕಾಂಗ್ರೆಸ್‌ಅನ್ನು ಕಟ್ಟಿಹಾಕಲು ಬಿಜೆಪಿ – ಜೆಡಿಎಸ್​ ಮೈತ್ರಿಕೂಟ ಸಜ್ಜಾಗಿದೆ.

ಪ್ರಮುಖವಾಗಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಆರೋಪ ಮತ್ತು ಬರ ಪರಿಹಾರದ ಹಣ ಬಿಡುಗಡೆ ಮಾಡದಿರುವ ವಿಷಯ ಮುಖ್ಯ ಚರ್ಚೆಗೆ ಬರಲಿದೆ. ಈ ಮೂಲಕ ಸರ್ಕಾರದ ವಿರುದ್ಧ ಸದನದಲ್ಲಿ ಮೈತ್ರಿಕೂಟ ಹೋರಾಟ ನಡೆಸಲು ಸಿದ್ಧವಾಗಿದೆ.

ಇನ್ನು ಮಂಗಳವಾರದಿಂದ ಕಲಾಪಗಳು ನಡೆಯಲಿವೆ. ಬಿಜೆಪಿಗೆ ತಕ್ಕ ಪ್ರತ್ತ್ಯುತ್ತರ ನೀಡಲು ಕಾಂಗ್ರೆಸ್ ಕೂಡ ಎಲ್ಲ ವಿಧದಲ್ಲೂ ಸಿದ್ಧತೆ ಮಾಡಿಕೊಂಡಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿರುವ ಕಾರಣ ಎರಡೂ ಕಡೆಗಳಿಂದ ಚರ್ಚೆಗೆ ಅಧಿವೇಶನ ಸಾಕ್ಷಿಯಾಗಲಿದೆ.

ಸರ್ಕಾರ ಹಲವು ಸವಾಲುಗಳ ಮಧ್ಯೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ಬಜೆಟ್ ಲೆಕ್ಕಾಚಾರದ ಮೇಲೆ ರಾಜ್ಯದ ಜನರ ಕಣ್ಣು ನೆಟ್ಟಿದೆ. ಒಂದು ಕಡೆ ರೈತರು, ಕೂಲಿ ಕಾರ್ಮಿಕರು, ಉದ್ಯೋಗಿಗಳು, ಉದ್ಯ,ಮಿಗಳು ಹೀಗೆ ಹತ್ತಾರು ರಂಗಗಳಲ್ಲಿ ತಲೆದೋರಿರುವ ಸಮಸ್ಯೆಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ