ಬೆಂಗಳೂರು : ವಿಧಾನ ಪರಿಷತ್ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ. ರಂಗನಾಥ್ ಅವರು ಅತ್ಯಂತ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಏಷ್ಯನ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಛೇರ್ಮನ್ ಕೆ.ಮಹೇಶ್ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಮಹೇಶ್ ಅವರು, ಎರಡೂ ಪಕ್ಷದ ನಾಯಕರು ರಂಗನಾಥ್ ಅವರನ್ನು ಆಯ್ಕೆ ಮಾಡಿದ್ದು, ಈಗಾಗಲೇ ಅವರ ಪರ ಮತ ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.
ಈ ಉಪಚುನಾವಣೆ ಮುಂದಿನ ರಾಜಕೀಯ ತಿರುವು ಪಡೆದುಕೊಳ್ಳಲಿದ್ದು, ಶಿಕ್ಷಕರು ಈ ಬಾರಿ ರಂಗನಾಥ್ ಅವರನ್ನು ಬೆಂಬಲಿಸುವ ಮೂಲಕ ನಿಮ್ಮ ಸೇವೆ ಮಾಡುವುದಕ್ಕೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.
ರಂಗನಾಥ್ ಅವರಿಗೆ ಗೆಲುವು ಖಚಿತ: ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿರುವ ರಂಗನಾಥ್ ಅವರಿಗೆ ಗೆಲುವು ಖಚಿತ. ಹಿಂದೆ ಪುಟ್ಟಣ್ಣ ಅವರು ಪಲಾಯನ ಮಾಡಿದ್ದಾರೆ. ಶಿಕ್ಷಕರ ಕ್ಷೇತ್ರ ಬೇಡ ಅಂತಾ ಹೋದವರು ಪುಟ್ಟಣ್ಣ ಮತ್ತೆ ಅವರನ್ನು ಬೆಂಬಲಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.