NEWSಬೆಂಗಳೂರುರಾಜಕೀಯ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಶಾಂತಿಯುತ: ಶೇ.86.38ರಷ್ಟು ಮತದಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಇಂದು ಉಪ ಚುನಾವಣೆ ನಡೆದಿದ್ದು, ಮತದಾರರು ಶಾಂತಿಯುತವಾಗಿಯೇ ಮತ ಚಲಾಯಿಸಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭ್ರವಾಗಿದೆ. ಇನ್ನು ಇದೇ ಫೆ.20ರಂದು ಯಾರು ಕ್ಷೇತ್ರದ ಗದ್ದುಗೆ ಹಿಡಿದರು ಎಂದುವುದು ಬಹಿರಂಗವಾಗಕಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಇಂದು ನಡೆದ ಉಪ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಲ್ಲದೆ ಶಾಂತಿಯುವಾಗಿ ಶೇ.86.38ರಷ್ಟು ಮತದಾನವಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 19,152 ಮತದಾರರಿದ್ದು, ಈ ಉಪ ಚುನಾವಣೆಯಲ್ಲಿ 16,544 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ಹಿಂದೆ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಉಪ ಚುನಾವಣೆ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಕಣಕ್ಕಿಳಿದಿದ್ದಾರೆ. ಒಟ್ಟಾರೆ ಈ ಇಬ್ಬರು ಅಭ್ಯರ್ಥಿಗಳ ಪರವಾಗಿ ಪಕ್ಷದ ಮುಖಂಡರು ಭಾರಿ ಮತ ಪ್ರಚಾರವನ್ನೇ ನಡೆಸಿದ್ದಾರೆ. ಆದರೆ ಯಾರು ಶಿಕ್ಷಕರ ಪ್ರತಿನಿಧಿಯಾಗಿ ಹೊರಹೊಮ್ಮುದ್ದಾರೆ ಎಂಬುದನ್ನು ತಿಳಿಯಲು ನಾವು ಫೆ.20ರವರೆಗೆ ಕಾಯಲೇ ಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ