ಬೆಂಗಳೂರು ಗ್ರಾಮಾಂತರ : ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 2024 ರ ಫೆಬ್ರವರಿ 29 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ನೆಲಮಂಗಲ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಹುದ್ದೆ-01, ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ಗ್ರಾಮಪಂಚಾಯಿತಿ, ಸೋಲದೇವನಹಳ್ಳಿ ಗ್ರಾಮ ಪಂಚಾಯತಿಗೆ ತಲಾ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತದೆ.
ಷರತ್ತುಗಳು: 1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.) 2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು. 3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು.
4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.
5) ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ. 6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.
7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ವಿಕಲಚೇತನರಾಗಿರಬಾರದು. 8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.
9) ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮಾಹೆಯಾನ ಗೌರವಧನ 15,000 ರೂ.ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ 9000 ರೂ.ಗೌರವಧನ ನೀಡಲಾಗುವುದು. ಇಲಾಖೆಯಿಂದ ಕಾಲಕಾಲಕ್ಕೆ ವಿಧಿಸುವ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ತಿಳಿಸಿದ್ದಾರೆ.