NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಇಂದು ಸಾರಿಗೆ ಅಧಿಕಾರಿಗಳು/ನೌಕರರ ಪರ ಧರಣಿ ಸತ್ಯಾಗ್ರಹ – ಜಂಟಿ ಕ್ರಿಯಾ ಸಮಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಮತ್ತು ಸಾರಿಗೆ ಮಂಡಳಿಯ ಮುಂದೆ ಹಲವು ಬೇಡಿಕೆಗಳನ್ನಿಟ್ಟು ಅವುಗಳ ಈಡೇರಿಕೆಗೆ ಒತ್ತಾಯಿಸಿ  ಇಂದು (ಫೆ.22)  ಸಾರಿಗೆಯ ನಾಲ್ಕೂ ನಿಗಮಗಳ ವಿಭಾಗೀಯ ಮತ್ತು ಕೇಂದ್ರ ಕಚೇರಿಗಳ ಎದುರು ಹಾಗೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂದು ದಿನದ ಧರಣಿಯನ್ನು ಜಂಟಿ ಕ್ರಿಯಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಾಯಕತ್ವದಲ್ಲಿ ಫೆ.14ರಂದು ಬೆಂಗಳೂರಿನಲ್ಲಿ ನಡೆದ ಸಾರಿಗೆ ನೌಕರರ ರಾಜ್ಯ ಸಮಾವೇಶದ ವೇಳೆ, ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ ಹಾಗೂ ಆಡಳಿತ ವರ್ಗದ ಮುಂದೆ ಬೇಡಿಕೆಗಳನ್ನು ಇಡಲಾಗಿದೆ. ಈ ಬೇಡಿಕೆಗಳ ಈಡೇರಿಕೆಗಾಗಿ‌ ಫೆ.22ರಂದು ಒಂದುದಿನದ ಧರಣಿ ನಡೆಸಲಾಗುತ್ತಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಡಿ.31, 2023ರ ಮೂಲ ವೇತನದ ಶೇ.25ರಷ್ಟು ಹೆಚ್ಚಳ ಮಾಡಿ ಜ.1, 2024ರಿಂದ ವೇತನ ಶ್ರೇಣಿ ಸಿದ್ಧಪಡಿಸಬೇಕು. ಜ.1, 2020ರಿಂದ ಆಗಿರುವ ಶೇ.15 ವೇತನ ಹೆಚ್ಚಳದ 38 ತಿಂಗಳ ಬಾಕಿ ತಕ್ಷಣ ಬಿಡುಗಡೆ ಮಾಡಬೇಕು. ಜ.1, 2020ರಿಂದ ಫೆ.28, 2023ರ ಅವಧಿ ಮಧ್ಯೆ ನಿವೃತ್ತರಾಗಿರುವ, ಮೃತಪಟ್ಟಿರುವ, ವಜಾಗೊಂಡಿರುವ ಹಾಗೂ ಕಾರಣಾಂತರಗಳಿಂದ ಸೇವೆಯಿಂದ ನಿರ್ಗಮಿಸಿರುವ ಎಲ್ಲ ಸಾರಿಗೆ ನೌಕರರಿಗೆ ಜ.1, 2020ರಿಂದ ಜಾರಿ ಮಾಡಿರುವ ವೇತನ ಶ್ರೇಣಿಗಳನ್ನು ಅನ್ವಯಿಸಿ, ಎಲ್ಲ ರೀತಿಯ ಆರ್ಥಿಕ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಲಾಗುತ್ತಿದೆ.

ಇನ್ನು ಪ್ರತಿ 10 ವರ್ಷಕ್ಕೊಮ್ಮೆ ಆಯ್ಕೆ ಶ್ರೇಣಿ ಬಡ್ತಿ ನೀಡಬೇಕು. ಆ.8, 2023ರಂದು ಸಮಿತಿ ವತಿಯಿಂದ ಸಲ್ಲಿಸಿರುವ ಬೇಡಿಕೆಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಚಾಲಕರು, ನಿರ್ವಾಹಕರು, ತಾಂತ್ರಿಕ, ಆಡಳಿತ ಸಿಬ್ಬಂದಿ ಮತ್ತು ಇತರ ಎಲ್ಲ ನೌಕರರಿಗೆ ನೀಡಲಾಗುತ್ತಿರುವ ಭತ್ಯೆಗಳಲ್ಲಿ ಐದು ಪಟ್ಟು ಹೆಚ್ಚಳ ಮಾಡಬೇಕು.

ಎಲ್ಲ ನೌಕರರಿಗೂ ಪ್ರತಿ ತಿಂಗಳು ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯಲು 2000 ರೂ. ನೀಡುವುದರ ಜತೆಗೆ, ಉಚಿತವಾಗಿ ಔಷಧ ವ್ಯವಸ್ಥೆ ಮಾಡಬೇಕು. ನೌಕರರ ಮೂಲ ವೇತನದ ಶೇ.4.5 ಹಾಗೂ ನೌಕರರಿಂದ ಶೇ.0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಈ ಸಾರಿಗೆ ನೌಕರರಿಗೆ ಇಎಸ್‌ಐ ಮಾದರಿಯಲ್ಲಿ ಆಡಳಿತ ವರ್ಗದಿಂದ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸಾ ವ್ಯವಸ್ಥೆ ಮಾಡಬೇಕು. ಈ ಸೌಲಭ್ಯ ನಿವೃತ್ತ ನೌಕರರ ಕುಟುಂಬಗಳಿಗೂ ಲಭಿಸುವಂತಾಗಬೇಕು.

2023ರ ಅವಧಿಗೆ ಕಡಿತಗೊಳಿಸಿರುವ ಅಪಘಾತ ವಿಮೆ ಪ್ರೀಮಿಯಂ ಮರು ಪಾವತಿಸಬೇಕು. 2024ರ ಅವಧಿಯ ವಿಮೆ ಕಂತು ಆಡಳಿತ ವರ್ಗವೇ ಭರಿಸಬೇಕು. ಸೇವಾನಿರತ ಅವಧಿಯಲ್ಲಿ ಸಹಜವಾಗಿ ಅಥವಾ ಅಪಘಾತದಲ್ಲಿ ಮೃತಪಡುವ ಸಾರಿಗೆ ನೌಕರರ ಸಂತ್ರಸ್ತ ಕುಟುಂಬಕ್ಕೆ ಕೆಎಸ್ಸಾರ್ಟಿಸಿ ರೀತಿಯಲ್ಲಿ ಅನುಕ್ರಮವಾಗಿ 10 ಲಕ್ಷ ರೂ. ಹಾಗೂ 1 ಕೋಟಿ ರೂ. ಪರಿಹಾರ ನೀಡುವ ಪದ್ಧತಿ ಜಾರಿಗೊಳಿಸಬೇಕು.

ಮುದ್ರಣಾಲಯ ಮತ್ತು ಕಾರ್ಯಾಗಾರಗಳ ತಾಂತ್ರಿಕ ಸಿಬ್ಬಂದಿಗೆ ಪ್ರತಿ 10 ವರ್ಷಕ್ಕೊಮ್ಮೆ ಮುಂಬಡ್ತಿ ನೀಡಬೇಕು. ಸಾರಿಗೆ ನಿಗಮಗಳ ವಿದ್ಯುತ್ ಚಾಲಿತ ಬಸ್‍ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು. ಶಕ್ತಿ ಯೋಜನೆಯಿಂದ ಚಾಲಕರು ಹಾಗೂ ನಿರ್ವಾಹಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು.

ಎಲ್ಲ ಬೇಡಿಕೆಗಳನ್ನು ಇಟ್ಟು ಫೆ.22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆ ವರೆಗೂ ಸಾರಿಗೆ ನಿಗಮಗಳ ವಿಭಾಗೀಯ ಕಚೇರಿಗಳು ಮತ್ತು ಕೇಂದ್ರ ಕಚೇರಿಗಳ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ. ಈ ಧರಣಿ ವೇಳೆ ಬಸ್‌ಗಳ ಸಂಚಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ರಜೆ ಇರುವವರು ಮತ್ತು ನಿವೃತ್ತ ನೌಕರರು ಭಾಗವಹಿಸಲಿದ್ದಾರೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು