NEWSಕೃಷಿ

ಉಡುಪಿಯಲ್ಲಿ ನೋಡಲ್ ಅಧಿಕಾರಿಗಳ ನೇಮಕ

ಚಿಲ್ಲರೆ ವ್ಯಾಪಾರ ಸರಬರಾಜು ಪ್ರಕ್ರಿಯೆಗಾಗಿ ನೇಮಕ l ಡಿಸಿ ಜಗದೀಶ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕೋವಿಡ್ -19 ಸಗಟು ಮತ್ತು ಚಿಲ್ಲರೆ ವ್ಯಾಪಾರದ ಸರಬರಾಜು ಪ್ರಕ್ರಿಯೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ   ಜನರಸಂಚಾರಿಸುವುದನ್ನು ನಿರ್ಬಂಧಿಸಲಾಗಿದೆ. ಇದನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ.

ಜನರಿಗೆ  ಅಗತ್ಯವಿರುವ ದಿನಸಿ ಮತ್ತಿತರ ಅವಶ್ಯಕ ಸಾಮಗ್ರಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ  ಸಾಮಾಜಿಕ ಅಂತರ ಪಾಲಿಸಿ ಖರೀದಿಸಲು ಅವಕಾಶವನ್ನು ನೀಡಿ ಪ್ರತಿದಿನ ಬೆಳಗ್ಗೆ 7 ರಿಂದ 11 ರವರೆಗೆ  ಸಮಯ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.

ಜಿಲ್ಲೆಯ ಸಾರ್ವಜನಿಕರ ದೈನಂದಿನ ಬಳಕೆಗೆ ಅವಶ್ಯಕವಿರುವ  ನಿತ್ಯದ ಆಹಾರ ಪದಾರ್ಥಗಳಾದ ಹಾಲು, ಪಡಿತರ ದವಸ ಧಾನ್ಯಗಳು, ಹಣ್ಣು ಮತ್ತು ತರಕಾರಿ ಹಾಗೂ ಇತರೆ ಅವಶ್ಯಕ ಸಾಮಗ್ರಿಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಾರ್ವಜನಿಕರಿಗೆ ಸಮರ್ಪಕವಾಗಿ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಅಗತ್ಯ ವಸ್ತುಗಳ ದಾಸ್ತಾನು ಶೇಖರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಮತ್ತು ದಿನನಿತ್ಯದ ಆಹಾರ ಸಾಮಗ್ರಿಗಳ ಪೂರೈಕೆಯ ಸಂಬಂಧ ಅಗತ್ಯ ಕ್ರಮವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ನೋಡಲ್ ಅಧಿಕಾರಿಗಳ ವಿವರ

ರಾಜು .ಕೆ ಸಹಾಯಕ  ಕಮೀಷನರ್ ಕುಂದಾಪುರ ಮೊ.ಸಂ.8762823984.

ಭುವನೇಶ್ವರಿ ,ಉಪ ನಿರ್ದೇಶಕರು ,ತೋmಗಾರಿಕೆ ಇಲಾಖೆ ಉಡುಪಿ ಮೊ.ಸಂ 9448999225.

ಗಜೇಂದ್ರ .ವಿ ಸಹಾಯಕ ನಿಯಂತ್ರಕರು  ಕಾನೂನು ಮಾಪನ ಶಾಸ್ತ್ರ ಉಡುಪಿ ಮೊ.ಸಂ. 9845154263.

ಗೋಪಾಲ್ ಕಾಕನೂರ್, ಕಾರ್ಯದರ್ಶಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕಾರ್ಕಳ, ಮೊ.ಸಂ 9886925800.

ಗಾಯತ್ರಿ , ಕಾರ್ಯದರ್ಶಿ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಉಡುಪಿ ಮೊ.ಸಂ.9900599335.

ದೀಪ್ತಿ , ಕಾರ್ಯದರ್ಶಿ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕುಂದಾಪುರ, 9663858151 ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಿ  ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ