ಮಂಡ್ಯ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಯೊಂದು ಭಾನುವಾರ ಬೆಳ್ಳಂಬೆಳಗ್ಗೆ ಹೊತ್ತಿ ಉರಿದಿರುವ ಘಟನೆ ತಾಲೂಕಿನ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿ ನಡೆದಿದೆ.
ಪ್ಲೇಕಾನ್ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ. ಇದರಿಂದ ಕಾರ್ಖಾನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಹೋಗಿದ್ದು ಲಕ್ಷಂತಾರ ರೂಪಾಯಿ ನಷ್ಟವಾಗಿದೆ.
ಬೆಂಕಿಯಿಂದಾಗಿ ಭಾರೀ ಮಟ್ಟದಲ್ಲಿ ಹೊಗೆ ಸುತ್ತ ಮುತ್ತಲಿನ ಪ್ರದೇಶವನ್ನು ಆವರಿಸಿಕೊಂಡಿತ್ತು. ಇದರಿಂದ ಸ್ಥಳೀಯರು ಕೆಲ ಕಾಲ ಆತಂಕಗೊಂಡಿದ್ದರು. ಅಷ್ಟರಲ್ಲಿ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ ತಕ್ಷಣ ಕಾರ್ಯಾಚರಣೆ ಕೈಗೊಂಡು ಕತ್ತಲಲ್ಲೇ ಬೆಂಕಿ ನಂದಿಸಿದರು.
ಬೆಂಕಿಯ ಕೆನ್ನಾಲಿಗೆ ಕಾರ್ಖಾನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಾಲಾಗಿದ್ದು, ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.