NEWSನಮ್ಮರಾಜ್ಯಶಿಕ್ಷಣ-

ತುಮಕೂರು ಮುಕ್ತ ವಿವಿ :  ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಇವರಿಗೆ ಸಿಗಲಿದೆ ಉಚಿತ ಪ್ರವೇಶಾತಿ

ವಿಜಯಪಥ ಸಮಗ್ರ ಸುದ್ದಿ

ತುಮಕೂರು:  ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2024ರ ಮಾರ್ಚ್ 31 ಕಡೆಯ ದಿನವಾಗಿದೆ.

ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ: ಬಿ.ಎ-ರೂ.7,700/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-11,500/-., ಬಿ.ಕಾಂ.-ರೂ.8,200/-., ಬಿ.ಸಿ.ಎ/ಬಿ.ಎಸ್ಸಿ-ರೂ.22,500/-., ಬಿ.ಎಸ್.ಡಬ್ಲ್ಯೂ-ರೂ.12,000/-., ಎಂ.ಎ-ರೂ.9,800/-., ಎಂ.ಎಸ್ಸಿ/ಎಂ.ಬಿ.ಎ/ಎಂ.ಸಿ.ಎ-ರೂ.28,000/-., ಎಂ.ಕಾಂ-ರೂ.11,500/-. ಎಂ.ಸಿ.ಜೆ-ರೂ.15,100/-., ಎಂ.ಎಸ್.ಡಬ್ಲ್ಯೂ-ರೂ.20,000/-., ಎಂ.ಎಲ್.ಐ.ಎಸ್ಸಿ-ರೂ.17,000/-ಗಳಾಗಿರುತ್ತದೆ.

ಬೋಧನಾ ಶುಲ್ಕ ರಿಯಾಯಿತಿ: ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ 15%, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ 25% ರಿಯಾಯಿತಿ ಇರುತ್ತದೆ.

ಉಚಿತ ಪ್ರವೇಶಾತಿ: ಕೋವಿಡ್‌ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ, ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂ.ಬಿ.ಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.

ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಆರ್. ಲೋಕೇಶ ತಿಳಿಸಿದ್ದಾರೆ‌.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ