Please assign a menu to the primary menu location under menu

NEWSಉದ್ಯೋಗನಮ್ಮಜಿಲ್ಲೆ

ನೌಕರರ ತುಟ್ಟಿಭತ್ಯೆ ಶೇ. 3.75ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಪ್ರಸ್ತುತ ಇದ್ದ ಶೇ. 38.75 ರಿಂದ ಶೇ. 42.5ಕ್ಕೆ ಹೆಚ್ಚಳವಾದಂತಾಗಿದೆ.

01-01-2024ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಹೇಳಲಾಗಿದೆ.

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು.

ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು. ಆದರೆ, 3.75% ರಷ್ಟು ಹೆಚ್ಚಿಸಿ ಆದೇಶ ಹೊರಿಡಿಸಿದೆ ರಾಜ್ಯಸರ್ಕಾರ.

ಇನ್ನು ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

error: Content is protected !!
LATEST
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?