NEWSನಮ್ಮರಾಜ್ಯಸಿನಿಪಥ

ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ

ಲಾಕ್‌ಡೌನ್‌ ಉಲ್ಲಘನೆ l ನಟಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕನ್ನಡ ಚಲನಚಿತ್ರ ನಟಿ ಶರ್ಮಿಳಾ ಮಾಂಡ್ರೆ ವಿರುದ್ಧ ದೂರು ದಾಖಲಾಗಿದೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಆಗಿದೆ. ಈ ನಿಯಮವನ್ನು ಉಲ್ಲಂಘಿಸಿ, ವಾಹನ ಚಾಲನೆ ಮಾಡಿ, ಅಪಘಾತಕ್ಕೀಡಾಗಿದ್ದು,  ಈ ಹಿನ್ನೆಲೆಯಲ್ಲಿ ಶರ್ಮಿಳಾ ಮಾಂಡ್ರೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಗಳೂರಿನ ವಸಂತನಗರದ ರೈಲ್ವೇ ಅಂಡರ್ ಪಾಸ್ ನಲ್ಲಿ ಚಲಿಸುತ್ತಿದ್ದಾಗ ಪಿಲ್ಲರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರು ಜಖಂಗೊಂಡಿದೆ.

ಅಪಘಾತಕ್ಕೀಡಾದ ಜಾಗ್ವಾರ್ ಕಾರಿನಲ್ಲಿ ಶರ್ಮಿಳಾ ಮಾಂಡ್ರೆ ಮತ್ತು ಲೋಕೇಶ್ ಪ್ರಯಾಣ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಅಪಘಾತದಿಂದ ಲೋಕೇಶ್ ಕೈಗೆ ಪೆಟ್ಟಾಗಿದ್ದು, ಶರ್ಮಿಳಾ ಮಾಂಡ್ರೆ ಕತ್ತು ಮತ್ತು ಮುಖಕ್ಕೆ ಪೆಟ್ಟಾಗಿದೆ ಎನ್ನಲಾಗಿದೆ. ಸದ್ಯ ಇವರಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಂತೆ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ