NEWSನಮ್ಮಜಿಲ್ಲೆಸಂಸ್ಕೃತಿ

ಮಾಜಿ ಸಿಎಂ ಎಚ್‌ಡಿಕೆಗೆ ಶಸ್ತ್ರ ಚಿಕಿತ್ಸೆ: ದೊಡ್ಡಗಣಪಗೆ ವಿಶೇಷ ಪೂಜೆ ಸಲ್ಲಿಸಿದ ಶರವಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಳೆ (ಮಾ.21) ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ.

ಮೂರನೇ ಬಾರಿ ಕುಮಾರಸ್ವಾಮಿ ಅವರಿಗೆ ಹಾರ್ಟ್ ಆಪರೇಷನ್ ನಡೆಯುತ್ತಿದ್ದು, ನಾಳೆ ನಡೆಯಲಿರುವ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.

ಕುಮಾರಸ್ವಾಮಿ ಅವರ ಆರೋಗ್ಯ ವೃದ್ಧಿಗಾಗಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹೃದಯ ಶಸ್ತ್ರ ಚಿಕಿತ್ಸೆಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿ ಬೇಗನೇ ಗುಣಮುಖರಾಗಲಿ ಎಂದು ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ.

ಇನ್ನು ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಶರವಣ, ಕುಮಾರಸ್ವಾಮಿಯವರಿಗೆ ನಾಳೆ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ತಾಯಿ ಹೃದಯದ ಕುಮಾರಸ್ವಾಮಿಯವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಜತೆಗೆ ಉತ್ತಮ ಆರೋಗ್ಯಕ್ಕಾಗಿ ವಿಘ್ನೇಶ್ವರನಿಗೆ ಪೂಜೆ ಹಾಗೂ 108 ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ