CrimeNEWSನಮ್ಮರಾಜ್ಯ

KSRTC: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 2ವರ್ಷ ಕಠಿಣ ಶಿಕ್ಷೆಗೆ ಒಳಗಾಗಿದ್ದ ಕಂಡಕ್ಟರ್‌ಗೆ ಬಿಗ್‌ ರಿಲೀಫ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ವಾಹಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅಸಭ್ಯ ವರ್ತನೆ ತೋರಿದ ಆರೋಪದಡಿ ಮಂಗಳೂರಿನ ನ್ಯಾಯಾಲಯ ವಿಧಿಸಿದ್ದ 2ವರ್ಷದ ಕಠಿಣ ಶಿಕ್ಷೆಗೆ ಹೈಕೋರ್ಟ್‌ ತಡೆ ನೀಡಿದ್ದು ಅಲ್ಲದೆ ಆರೋಪಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ KSRTC ಸಂಸ್ಥೆಯ ಸುಳ್ಯ ಘಟಕದ ನಿರ್ವಾಹಕ ಬಾಗಲಕೋಟೆಯ ದಾವಲ್ ಸಾಬ್ (35) ಎಂಬುವರಿಗೆ 2024ರ ಫೆಬ್ರವರಿ 23ರಂದು ಮಂಗಳೂರಿನ ಹೆಚ್ಚುವರಿ ಜಿಲ್ಲೆ ಮತ್ತು ಸೆಷನ್ಸ್ (FTSC-I POCSO) ನ್ಯಾಯಾಲಯ 2 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿತ್ತು.

ಈ ತೀರ್ಪಿನ ವಿರುದ್ಧ ಆರೋಪಿ ಹೈ ಕೋರ್ಟ್‌ ಮೆಟ್ಟಿಲೇರಿದ್ದರು. ದಾವಲ್ ಸಾಬ್ ಪರ ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ವಕಾಲತ್ತು ವಹಿಸಿ ಕೋರ್ಟ್‌ನಲ್ಲಿ ವಾದ ಮಂಡಿಸಿದರು. ಈ ವೇಳೆ ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್‌ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠ ಶಿಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು.

ಹೈಕೋರ್ಟ್‌ ಶರತ್ತು ಏನು?: 50 ಸಾವಿರ ರೂ. ಮೌಲ್ಯದ ಬಾಂಡ್‌ ನೀಡಬೇಕು. ಇಬ್ಬರು ಜಾಮೀನು ಕೊಡಬೇಕು ಮತ್ತು ಮಂಗಳೂರಿನ ಹೆಚ್ಚುವರಿ ಜಿಲ್ಲೆ ಮತ್ತು ಸೆಷನ್ಸ್ (FTSC-I POCSO) ಕೋರ್ಟ್‌ ವಿಧಿಸಿರುವ ಫೈನ್‌ಅನ್ನು 4 ವಾರಗಳೊಳಗೆ ಅದೇ ನ್ಯಾಯಲಯಕ್ಕೆ ಕಟ್ಟಬೇಕು ಎಂಬ ಶರತ್ತು ವಿಧಿಸಿದೆ.

ಈ ಪ್ರಕರಣ ಏನು?: ಕಳೆದ 2023ರ ಮಾರ್ಚ್‌ನಲ್ಲಿ ಬಾಲಕಿ ಶಾಲೆಯಿಂದ ಬಿ.ಸಿ. ರೋಡ್‌ನಲ್ಲಿನ ತನ್ನ ಮನೆಗೆ ಬರಲು ಕಲ್ಲಡ್ಕದಲ್ಲಿ ಬಸ್ ಹತ್ತಿದ್ದಳು. ಬಸ್‌ನಲ್ಲಿ ನಾಲೈ ಪ್ರಯಾಣಿಕರಷ್ಟೇ ಇದ್ದರು. ಮುಂದಿನ ನಿಲ್ದಾಣದಲ್ಲಿ ಅವರೂ ಇಳಿದರು. ಆಗ ನಿರ್ವಾಹಕ ಬಾಲಕಿ ಬಳಿ ಬಂದು ಅಶ್ಲೀಲವಾಗಿ ವರ್ತಿಸಿದ್ದ ಈ ಬಗ್ಗೆ ನಮ್ಮ ಅಪ್ಪ ಅಮ್ಮ ಮತ್ತು ಪೊಲೀಸರಿಗೆ ಹೇಳುತ್ತೇನೆ ಎಂದು ಬಾಲಕಿ ಹೇಳಿದರೂ ಲೆಕ್ಕಿಸದೆ ಅಸಭ್ಯವಾಗಿ ನಿರ್ವಾಹಕ ವರ್ತಿಸಿದ್ದ ಎಂಬ ಆರೋಪ ಮಾಡಲಾಗಿದೆ.

ಮುಂದುವರಿದು ಇದರಿಂದ ತೀವ್ರವಾಗಿ ನೊಂದಿದ್ದ ಬಾಲಕಿ ಬಸ್‌ನ ನಂಬರ್‌ ಸಮೇತ ಮನೆಯಲ್ಲಿ ತಾಯಿ ಬಳಿ ಎಲ್ಲವನ್ನೂ ವಿವರಿಸಿದ್ದಳು. ಬಳಿಕ ತಾಯಿ ಮತ್ತು ಬಾಲಕಿ ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ ಮಂಗಳೂರಿಗೆ ವಾಪಸು ಹೊರಟಿದ್ದ ಬಸ್‌ನಲ್ಲಿದ್ದ ನಿರ್ವಾಹಕನನ್ನು ವಶಕ್ಕೆ ಪಡೆದಿದ್ದರು. ಇನ್‌ಸ್ಪೆಕ್ಟರ್ ನಂದಿನಿ ಎಸ್. ಶೆಟ್ಟಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಎಫ್‌ಟಿಎಸ್‌ಸಿ-1 ಪೋಕ್ಸೋ)ದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಫೆ.23ರಂದು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.

ತೀರ್ಪಿನಲ್ಲಿ ಒಂದು ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ತಿಂಗಳು ಸಾದಾ ಸಜೆ. ಇನ್ನು ಪೋಕ್ಸೋ ಕಾಯಿದೆಯಡಿ 2 ವರ್ಷ ಕಠಿಣ ಸಜೆ ಮತ್ತು 10,000 ರೂ. ದಂಡ, ದಂಡ ಪಾವತಿಸದಿದ್ದರೆ ಮತ್ತೆ 2 ತಿಂಗಳು ಸಾದಾ ಸಜೆ ವಿಧಿಸಿದ್ದರು.

ಇನ್ನು ತೀರ್ಪಿನ ವಿರುದ್ಧ ಆರೋಪಿ ನಿರ್ವಾಹಕ ದಾವಲ್ ಸಾಬ್ ಹೈ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಕ್ಕೆ ವಕೀಲರಾದ ಎಚ್‌.ಬಿ.ಶಿವರಾಜು ಅವರನ್ನು ಭೇಟಿ ಮಾಡುವಂತೆ ಸುಳ್ಯ ಘಟಕದ ಜೀವನ್‌ ಮಾರ್ಟಿಸ್‌ ಅವರು ಸಲಹೆ ನೀಡಿದ್ದರು. ಅದರಂತೆ ಆರೋಪಿ ವಕೀಲರನ್ನು ಭೇಟಿ ಮಾಡಿದ್ದರ ಫಲವಾಗಿ ಇಂದು ಹೈಕೋರ್ಟ್‌ನಲ್ಲಿ ಸದ್ಯಕ್ಕೆ ರಿಲೀಫ್‌ ಸಿಕ್ಕಿದೆ. ಇದರಿಂದ ದಾವಲ್ ಸಾಬ್ ಮತ್ತೆ ಕರ್ತವ್ಯಕ್ಕೆ ಮರಳುವ ಸಾಧ್ಯತೆ ಇದೆ.

ಹೈ ಕೋರ್ಟ್‌ ನೀಡಿರುವ ತಡೆಯಾಜ್ಞೆ ಆದೇಶದ ಪ್ರತಿಯನ್ನು KSRTC ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಇನ್ನೆರಡು ದಿನದಲ್ಲಿ ಖುದ್ದು ವಕೀಲರೆ ನೀಡಿ ನಿರ್ವಾಹಕನನ್ನು ಮತ್ತೆ ಕರ್ತವ್ಯಕ್ಕೆ ತೆಗೆದುಕೊಳ್ಳುವುದಕ್ಕೆ ಮಾನವೀಯತೆ ದೃಷ್ಟಿಯಿಂದ ಮನವಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ